ಮಂಡ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಳವಳ್ಳಿ ತಾಲೂಕಿನ ಸಂಶೆಟ್ಟಿಪುರದ ಬಳಿ ಸಂಭವಿಸಿದೆ.
ಮೈಸೂರು-ಮಳವಳ್ಳಿ ರಸ್ತೆಯಲ್ಲಿರುವ ಸಂಶೆಟ್ಟಿಪುರ ಗ್ರಾಮದ ಬಳಿ ಎರಡೂ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಮೃತಪಟ್ಟ ಮಹಿಳೆ ಹಾಗೂ ಗಾಯಾಳುಗಳ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.