ಮಂಡ್ಯ: ಲೈಂಗಿಕ ಕಿರುಕುಳ ನೀಡಿ, ಅಕ್ರಮ ಸಂಬಂಧಕ್ಕೆ ಒಪ್ಪದ ಸೊಸೆಯನ್ನು ಕೊಂದು ಹಾಕಿದ್ದ ಮಾವ ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯದ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ನಾಗರಾಜು (56) ಆತ್ಮಹತ್ಯೆಗೆ ಶರಣಾದ ಕೊಲೆ ಆರೋಪಿ. ನಾಗರಾಜು ನವೆಂಬರ್ 9ರಂದು ತನ್ನ ಸೊಸೆಯನ್ನು ಕೊಲೆಗೈದಿದ್ದ. ಅಕ್ರಮ ಸಂಬಂಧಕ್ಕೆ ಒಪ್ಪದಿದ್ದಕ್ಕೆ ಕೊಲೆ ಮಾಡಿದ್ದಾರೆಂದು ನಾಗರಾಜು ಪುತ್ರ ದೂರು ನೀಡಿದ್ದರು.
ದೂರನ್ನು ಆಧರಿಸಿ ಪೊಲೀಸರು ಮಾವನನ್ನು ಬಂಧಿಸಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಿದ್ದರು. ಇಂದು ಮುಂಜಾನೆ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ನಾಗರಾಜುಗೆ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.