ಮಂಡ್ಯ: ಜಿಲ್ಲೆಯಲ್ಲಿ ಹೈನುಗಾರಿಕೆಯನ್ನು ನಂಬಿಕೊಂಡಿರುವ ರೈತರಿಗೆ ಮಂಡ್ಯ ಹಾಲು ಒಕ್ಕೂಟ ದೀಪಾವಳಿಗೂ ಮೊದಲೆ ಭರ್ಜರಿ ಗಿಫ್ಟ್ ನೀಡಿದ್ದು, ಪ್ರತಿ ಲೀಟರ್ ಹಾಲಿಗೆ 2.50 ರೂಪಾಯಿ ಹೆಚ್ಚಳ ಮಾಡಿದೆ.
ಆಡಳಿತ ಮಂಡಳಿ ಸಭೆಯಲ್ಲಿ ಬೆಲೆ ಹೆಚ್ಚಳದ ನಿರ್ಧಾರ ಮಾಡಲಾಗಿದ್ದು, ಅಕ್ಟೋಬರ್ 11ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಹೈನುಗಾರಿಕೆಯನ್ನು ನಂಬಿಕೊಂಡಿದ್ದು, ಹೊಸ ಆಡಳಿತ ಮಂಡಳಿಯ ಈ ನಿರ್ಧಾರ ಜಿಲ್ಲೆಯ ರೈತರಿಗೆ ಸಂತಸ ತರಿಸಿದೆ.