ಮಂಡ್ಯ: ವೈದ್ಯರ ಯಡವಟ್ಟಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಮಳವಳ್ಳಿ ತಾಲೂಕಿನ ದಡಮಹಳ್ಳಿ ಗ್ರಾಮದಲ್ಲಿ ಸಂಬಂಧಿಕರು ಆರೋಪಿಸಿದ್ದಾರೆ.
ಶಿವಲಿಂಗೇಗೌಡ (58) ಮೃತ ವ್ಯಕ್ತಿ.
ವೈದ್ಯ ಕೃಷ್ಣಮೂರ್ತಿ, ಶಿವಲಿಂಗೇಗೌಡನಿಗೆ ಜ್ವರದ ಇಂಜೆಕ್ಷನ್ ನೀಡಿದ್ದರು. ಇಂಜೆಕ್ಷನ್ ನೀಡಿದ ಬಳಿಕ ಸೊಂಟದಲ್ಲಿ ಊತ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ಸಂಬಂಧಿಕರು ಹೇಳಿದ್ದಾರೆ.
ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ ವೈದ್ಯ ಕೃಷ್ಣಮೂರ್ತಿ ಕ್ಲಿನಿಕ್ ನಡೆಸುತ್ತಿದ್ದಾರೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.