ಮಂಡ್ಯ: ಕೊಂಡ ಹಾಯಲು ಹೋದ ಪೂಜಾರಿ ಕೊಂಡಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಮೃತೇಶ್ವರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮ ದೇವತೆ ಹಬ್ಬದ ನಿಮಿತ್ತ ಇಂದು ಕೊಂಡಹಾಯಲು ಹೋಗಿದ್ದ ಪೂಜಾರಿ ಆಯತಪ್ಪಿ ಕೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾನೆ. ಜಿಲ್ಲೆಯಲ್ಲಿ ಈ ಹಿಂದೆಯು ಕೊಂಡಕ್ಕೆ ಬಿದ್ದಿರುವ ಹಲವಾರು ಪ್ರಕರಣಗಳಿದ್ದು, ಈಗಲೂ ಕೂಡ ಮುಂದುವರೆದಿದೆ. ಇಂದು ಬೆಳಗ್ಗೆ ಕೊಂಡಕ್ಕೆ ಬಿದ್ದು ಗಾಯಗೊಂಡ ಅರ್ಚಕನನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನು ಓದಿ: ವೈರಮುಡಿ ಉತ್ಸವ: ಜಿಲ್ಲಾ ಖಜಾನೆಯಿಂದ ಮೇಲುಕೋಟೆಗೆ ಕಿರೀಟ ರವಾನೆ
ಈ ಹಿಂದೆ ಕೂಡ ಜಿಲ್ಲೆಯಲ್ಲಿ ಇಂತಹ ಹಲವಾರು ಪ್ರಕರಣಗಳು ನಡೆದಿದ್ದು, ಸಾವುಗಳು ಕೂಡ ಸಂಭವಿಸಿದೆ. ಇಷ್ಟಾದರೂ ಎಚ್ಚೆತ್ತುಕೊಳ್ಳದೇ ಕೊಂಡ ಹಾಯಲು ಜನರು ಮುಂದಾಗಿದ್ದಾರೆ.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.