ETV Bharat / state

ಮಂಡ್ಯ: ವ್ಯಕ್ತಿಯ ಬರ್ಬರ ಹತ್ಯೆ, ಆದಷ್ಟು ಬೇಗ ಆರೋಪಿಗಳ ಬಂಧನ; ಎಸ್​ ಪಿ ಮಾಹಿತಿ - etv bharat kannada

ಶ್ರೀರಂಗಪಟ್ಟಣದ ಕಾರೇಕುರ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

a-person-brutally-murdered-in-karekura-village-at-mandya
ಮಂಡ್ಯ: ವ್ಯಕ್ತಿಯ ಬರ್ಬರ ಹತ್ಯೆ
author img

By ETV Bharat Karnataka Team

Published : Dec 9, 2023, 3:34 PM IST

Updated : Dec 9, 2023, 3:46 PM IST

ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಪ್ರತಿಕ್ರಿಯೆ

ಮಂಡ್ಯ: ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (34) ಮೃತರು. ಪೇಂಟಿಂಗ್​ ಕೆಲಸ ಮಾಡಿಕೊಂಡಿದ್ದ ಯೋಗೇಶ್‌ನನ್ನು ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಯೋಗೇಶ್ ಜತೆ ಹಳೆ ವೈಷಮ್ಯ ಹೊಂದಿದ್ದವರು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶ್ರೀರಂಗಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಡೆಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಪಂಚನಾಮೆ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮಾತನಾಡಿ, "ಇಂದು ಮುಂಜಾನೆ ಶ್ರೀರಂಗಪಟ್ಟಣ ಟೌನ್​ ಪೊಲೀಸ್​ ಠಾಣೆ ವ್ಯಾಪ್ತಿಯ ಕಾರೇಕುರ ಗ್ರಾಮದಲ್ಲಿ 30 ವರ್ಷದ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಮೃತ ವ್ಯಕ್ತಿ ಮೂಲತಃ ಊಟಿಯವರಾಗಿದ್ದು, ಕಳೆದ ಆರೇಳು ವರ್ಷಗಳಿಂದ ಕಾರೇಕುರ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ವ್ಯಕ್ತಿಯ ತಲೆಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಶ್ರೀರಂಗಪಟ್ಟಣ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ತನಿಖೆ ಮುಂದುವರೆಯುತ್ತಿದ್ದು, ಆರೋಪಿಗಳು ಯಾರು, ಏಕೆ ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅದಷ್ಟು ಬೇಗ ಆರೋಪಿಗಳನ್ನು ಪತ್ತೆ ಮಾಡಿ, ಪ್ರಕರಣವನ್ನು ಭೇದಿಸುತ್ತೇವೆ" ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿ: ಕೆಲಸಕ್ಕೆ ಹೋಗೆಂದ ಪತ್ನಿ ಕೊಂದು, ಪತಿ ಆತ್ಮಹತ್ಯೆ

Last Updated : Dec 9, 2023, 3:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.