ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕಚೇರಿಯ ಕಂದಾಯ ಇಲಾಖೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭೂ ದಾಖಲೆ ವಿಭಾಗದ ಮುಖ್ಯಸ್ಥ ಮಂಜುನಾಥ್, ರೈತ ದಿನೇಶ್ ಎಂಬುವರಿಂದ 3 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಡಿವೈಎಸ್ಪಿ ಧರಣೇಂದ್ರ ನೇತೃತ್ವದ ತಂಡ ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಮಂಜುನಾಥ್ ಕಚೇರಿ ಪರಿಶೀಲನೆ ನಡೆಸುತ್ತಿದ್ದು, ಎಸಿಬಿ ಅಧಿಕಾರಿಗಳ ದಾಳಿಯಿಂದ ತಾಲೂಕು ಕಚೇರಿಯಲ್ಲಿದ್ದ ಸಿಬ್ಬಂದಿ ಕಂಗಾಲಾಗಿದ್ದಾರೆ.