ETV Bharat / state

ಬೈಕ್​ಗೆ ಟಿಪ್ಪರ್ ಡಿಕ್ಕಿ: ಒಂದೇ ಕುಟುಂಬದ ಮೂವರ ದುರ್ಮರಣ - ಮಂಡ್ಯದಲ್ಲಿ ಅಪಘಾತ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಲ್ಲಾಕನಹಳ್ಳಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ನಡೆದಿದೆ.

accident
accident
author img

By

Published : Apr 30, 2021, 5:13 PM IST

ಮಂಡ್ಯ: ಟಿಪ್ಪರ್ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಮಲ್ಲಾಕನಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಲ್ಲಾಕನಹಳ್ಳಿ ಗ್ರಾಮದ ಬಳಿ ಇರುವ ತುಮಕೂರು-ಮಂಡ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಅಪಘಾತವಾಗಿದೆ. ವೇಗವಾಗಿ ಬಂದ ಟಿಪ್ಪರ್, ಬೈಕ್​ಗೆ ಡಿಕ್ಕಿ ಹೊಡೆದಿದ್ದರಿಂದ ಅವಘಡ ಸಂಭವಿಸಿದೆ.

ತುಮಕೂರು ಮೂಲದ ನರಸಿಂಹಮೂರ್ತಿ, ಲೋಕೇಶ್ ಹಾಗೂ ರಮೇಶ್ ಮೃತ ವ್ಯಕ್ತಿಗಳು. ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.