ETV Bharat / state

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಮಹಿಳೆ ಸಾವು, ಮತ್ತಿಬ್ಬರಿಗೆ ಗಾಯ - ಮದ್ದೂರು ಸಂಚಾರಿ ಪೊಲೀಸ್ ಠಾಣೆ

ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ.

Etv Bharatcrime-woman-died-in-bangalore-mysore-national-highway-at-mandya
ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಮಹಿಳೆ ಸಾವು, ಮತ್ತಿಬ್ಬರಿಗೆ ಗಾಯ
author img

By

Published : Jun 21, 2023, 10:21 PM IST

ಮಂಡ್ಯ: ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದ್ದೂರು ಬೈಪಾಸ್ ರಸ್ತೆಯಲ್ಲಿ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನಪಟ್ಟಣ ಟೌನ್​ನ ಮಂಡಿಪೇಟೆ ನಿವಾಸಿ ವರಲಕ್ಷ್ಮಿ (60) ಮೃತರು. ಸುಧಾಕರ್ ಹಾಗೂ ಗೌತಮಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯದ ಆಸ್ಪತ್ರೆಯಲ್ಲಿ ತಮ್ಮ ಸಂಬಂಧಿಕರನ್ನು ನೋಡಿಕೊಂಡು ಚನ್ನಪಟ್ಟಣಕ್ಕೆ ಹೋಂಡಾ ಆ್ಯಕ್ಟಿವಾದಲ್ಲಿ ವಾಪಸಾಗುತ್ತಿದ್ದಾಗ ಮದ್ದೂರು ಬೈಪಾಸ್ ರಸ್ತೆಯಲ್ಲಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಮಗ ಮತ್ತು ಮೊಮ್ಮಗಳು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಮಂಡ್ಯದ ಮಿಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Chikmagalur accident : ಸ್ನೇಹಿತನ ಸ್ನೇಹಿತೆಯನ್ನು ಬೈಕ್​ನಲ್ಲಿ ಕರೆ ತರುವಾಗ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

ಕಾರು ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು: ಇತ್ತೀಚಿಗೆ ಕಾರು ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯ ಮದ್ದೂರು ಬೈಪಾಸ್ ರಸ್ತೆಯಲ್ಲಿ ನಡೆದಿತ್ತು. ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯ ಮೃತದೇಹ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಮದ್ದೂರು ಪಟ್ಟಣದ ಕೆ. ಕೋಡಿಹಳ್ಳಿ ಗ್ರಾಮದ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಬೈಪಾಸ್ ರಸ್ತೆಯನ್ನು ದಾಟುತ್ತಿದ್ದರು. ಈ ವೇಳೆ ಮೈಸೂರಿನಿಂದ ಬೆಂಗಳೂರಿಗೆ ವೇಗವಾಗಿ ತೆರಳುತ್ತಿದ್ದ ಕಾರು ಡಿಕ್ಕಿ ವ್ಯಕ್ತಿಗೆ ಹೊಡೆದಿತ್ತು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಕಾರಿನ ಮೇಲೆ ಬಿದ್ದಿದ್ದು, ಬಳಿಕ ಹೆದ್ದಾರಿಯಲ್ಲಿ ಬಿದ್ದು ಮೃತಪಟ್ಟಿದ್ದರು.

ಈ ವೇಳೆ ವೇಗವಾಗಿ ಬಂದ ಇತರ ವಾಹನಗಳು ವ್ಯಕ್ತಿಯ ಮೃತದೇಹದ ಮೇಲೆ ಹರಿದ ಪರಿಣಾಮ ದೇಹದ ಭಾಗಗಳು ಚಲ್ಲಾಪಿಲ್ಲಿಯಾಗಿ ಹೆದ್ದಾರಿಯಲ್ಲಿ ಹರಡಿಕೊಂಡಿದ್ದವು. ಇದರಿಂದಾಗಿ ಶವದ ಗುರುತನ್ನು ಪತ್ತೆ ಹಚ್ಚಲು ಕಷ್ಟವಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗೂ ಸಂಚಾರಿ ಠಾಣಾ ಪೊಲೀಸರು ದೇಹದ ಭಾಗಗಳನ್ನು ಹೆದ್ದಾರಿಯಿಂದ ತೆರವುಗೊಳಿಸಿ ಮಂಡ್ಯ ಮಿಮ್ಸ್​ನ ಶವಾಗಾರಕ್ಕೆ ರವಾನಿಸಿದ್ದರು.

ಪ್ರಕರಣ ಸಂಬಂಧ ಸಂಚಾರಿ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೊತೆಗೆ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಡ್ಯ ಜಿಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಯಾರಾದರೂ ಕಾಣೆಯಾಗಿದ್ದರೆ ಅಥವಾ ದೂರು ದಾಖಲಾಗಿದ್ದರೆ, ಸಂಬಂಧಪಟ್ಟವರು ಇಲ್ಲಿಗೆ ಬಂದು ಪರಿಶೀಲನೆ ಮಾಡಬಹುದು ಎಂದು ಪೊಲೀಸರು ತಿಳಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.