ETV Bharat / state

ಮಂಡ್ಯದಲ್ಲಿ ಭೀಕರ ಅಪಘಾತ: ಇತ್ತೀಚೆಗಷ್ಟೇ ಮದುವೆಯಾದ ನವ ಜೋಡಿ ಸೇರಿ ಮೂವರ ದುರ್ಮರಣ

author img

By

Published : Jan 2, 2022, 6:19 PM IST

Updated : Jan 2, 2022, 6:33 PM IST

ಬಸ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ನವ ಜೋಡಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಅಪಘಾತ ನಡೆದಿದೆ.

ನಾಗಮಂಗಲದಲ್ಲಿ ಭೀಕರ ಅಪಘಾತ
ನಾಗಮಂಗಲದಲ್ಲಿ ಭೀಕರ ಅಪಘಾತ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವ ಜೋಡಿ ಸೇರಿ ಮೂವರು ಸಾವಿಗೀಡಾಗಿದ್ದು, ಇನ್ನೊಬ್ಬರ ಸ್ಥಿತಿ ಚಿಂತಾಜನವಾಗಿದೆ. ಕೆಂಪನಕೊಪ್ಪು ಗೇಟ್ ಬಳಿ ಖಾಸಗಿ ಬಸ್ ಮತ್ತು‌ ಕಾರಿನ ಮಧ್ಯೆ ಡಿಕ್ಕಿಯಾಗಿ ದುರ್ಘಟನೆ ನಡೆದಿದೆ.

ಮೃತರೆಲ್ಲರೂ ಕೊಡಗಿನ ಸೋಮವಾರ ಪೇಟೆಯವರು ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ನಾಲ್ಕು ಮಂದಿಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನೋರ್ವ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ಬೆಳ್ಳೂರು ಕಡೆಗೆ ತೆರಳುತ್ತಿದ್ದ ಬಸ್, ಮೈಸೂರು ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ನಾಗಮಂಗಲದಲ್ಲಿ ಭೀಕರ ಅಪಘಾತ
ನಾಗಮಂಗಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ಜೋಡಿ ಸಾವು

ಅಪಘಾತದಲ್ಲಿ ನವ ಜೋಡಿ ಸಾವು:

ಕೆಲ ದಿನಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸುದೀಪ್ ಹಾಗೂ ಶ್ರೀಜಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಎಳ್ಳ ಅಮವಾಸ್ಯೆ ಹಿನ್ನೆಲೆ ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ, ಅಲ್ಲಿ ಪೂಜೆ ಮುಗಿಸಿ ವಾಪಸ್ ಸೋಮವಾರ ಪೇಟೆಗೆ ಬರುವಾಗ ಅಪಘಾತ ಸಂಭವಿಸಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಇದನ್ನೂ ಓದಿ: ಕೋವಿಡ್​ ಬಿಕ್ಕಟ್ಟಿನಿಂದ 3 ವರ್ಷ ದೂರ, ದೂರ.. ಪ್ರೇಯಸಿ ಭೇಟಿಗೆ ಸಾಧ್ಯವಾಗದ್ದಕ್ಕೆ ದುರಂತ!)

Last Updated : Jan 2, 2022, 6:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.