ಮಂಡ್ಯ: ಜಿಲ್ಲೆಯಲ್ಲಿಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಾಟಾ ಏಸ್ವೊಂದು ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.
ಯೋಗೇಶ್ (30) ಹಾಗೂ ಬೇಬಿ (18) ಮೃತಪಟ್ಟವರು. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿಯ ಜಯರಾಮೇಗೌಡ ಅವರ ಕುಟುಂಬ ದೇವರ ದರ್ಶನಕ್ಕಾಗಿ ಚುಂಚನಗಿರಿಗೆ ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ಬೆಳ್ಳೂರು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಿಂದ ಟಾಟಾ ಏಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಚಾಲಕ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವೀಕ್ಷಿಸಿ : ಕಂದಕಕ್ಕೆ ಉರುಳಿ ಬಿದ್ದ Goods truck: ಭೀಕರ ಘಟನೆಯ ವಿಡಿಯೋ
ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ಳೂರು ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.