ETV Bharat / state

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ: ನಾಲ್ವರು ಆರೋಪಿಗಳ ಬಂಧನ - accused arrested in Mandya youth murder case

ಮಂಡ್ಯದ ಕಲ್ಲಹಳ್ಳಿಯ ರೈಲ್ವೆ ಗೇಟ್ ಬಳಿ ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

Mandya youth murder case
ಆರೋಪಿಗಳ ಬಂಧನ
author img

By

Published : Dec 21, 2021, 5:31 PM IST

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ನಡೆದ ಎರಡೇ ದಿನದಲ್ಲಿ ಮಂಡ್ಯ ಪಶ್ಚಿಮ ಠಾಣೆ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಡ್ಯ ಎಸ್ಪಿ ಎನ್.ಯತೀಶ್

ಪ್ರಮುಖ ಆರೋಪಿ ಇನ್ನು ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿಸಿರುವ ಪೊಲೀಸರು ಅವನ ಮೊಬೈಲ್ ಟ್ರ್ಯಾಕ್ ಮಾಡುತ್ತಿದ್ದಾರೆ. ಡಿ.18 ರ ತಡರಾತ್ರಿ ಮಂಡ್ಯದ ಕಲ್ಲಹಳ್ಳಿಯ ರೈಲ್ವೆ ಗೇಟ್ ಬಳಿ ಯಲಿಯೂರು ಗ್ರಾಮದ ರಕ್ಷಿತ್ (21) ಎಂಬಾತನನ್ನು ಆತನ ಐವರು ಸ್ನೇಹಿತರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಕಾರ್ತಿಕ್ ಚಿಕ್ಕಪ್ಪನ ಮೇಲೆ ರಕ್ಷಿತ್ ಹಲ್ಲೆ ಮಾಡಿದ್ದ ಎಂಬ ಕಾರಣಕ್ಕೆ ಕೃತ್ಯ ಎಸಗಲಾಗಿತ್ತು.

Mandya youth murder case
ಕೊಲೆಯಾದ ರಕ್ಷಿತ್

ಹೆಚ್ಚಿನ ಓದಿಗೆ: ಮಂಡ್ಯದಲ್ಲಿ ಹರಿದ ನೆತ್ತರು.. ತಡರಾತ್ರಿ ಯುವಕನ ಕರೆಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಡಿವೈಎಸ್ಪಿ ಮಂಜುನಾಥ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಮಾದೇಶ, ಕಾಶಿ, ಮಂಜು, ಕಾರ್ತಿಕ್ ಎಂಬ ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ರೌಡಿಸಂ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ರೌಡಿಶೀಟರ್​ಗಳಿಗೆ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಮಂಡ್ಯ ಎಸ್ಪಿ ಎನ್.ಯತೀಶ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.