ETV Bharat / state

ಮಂಡ್ಯ ಚುನಾವಣಾ ರಾಯಭಾರಿಯಾಗಿ ನಟ ನೀನಾಸಂ ಸತೀಶ್: ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮಂಡ್ಯ ಚುನಾವಣೆ ರಾಯಭಾರಿಯಾಗಿ ನಟ ನೀನಾಸಂ ಸತೀಶ್​​ ಅವರನ್ನು ಆಯ್ಕೆ ಮಾಡಲಾಗಿದೆ.

author img

By

Published : Apr 13, 2023, 7:04 PM IST

Updated : Apr 13, 2023, 7:20 PM IST

actor-ninasam-satish-as-mandya-election-ambassador
ಮಂಡ್ಯ ಚುನಾವಣಾ ರಾಯಭಾರಿಯಾಗಿ ನಟ ನೀನಾಸಂ ಸತೀಶ್ : ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ಮಂಡ್ಯ ಚುನಾವಣಾ ರಾಯಭಾರಿಯಾಗಿ ನಟ ನೀನಾಸಂ ಸತೀಶ್

ಮಂಡ್ಯ : 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮೇ 10 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಅಂದಿನ ದಿನ ಯುವಕರು ಹಾಗೂ ಪ್ರಜ್ಞಾವಂತ ನಾಗರೀಕರು ಪ್ರಜ್ಞೆಯಿಂದ ಮತದಾನ ಮಾಡಿ‌ ಈ ರಾಜ್ಯದ ಭವಿಷ್ಯ ಬರೆಯಬೇಕು. ಬದಲಾವಣೆ ಮಾಡುವ ಶಕ್ತಿ ನಿಮ್ಮ ಕೈಯಲ್ಲಿದೆ. ಜವಾಬ್ದಾರಿ ಅರಿತು ಕಡ್ಡಾಯವಾಗಿ ಯೋಗ್ಯ ವ್ಯಕ್ತಿಗೆ ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಬೇಕು ಎಂದು ಮಂಡ್ಯ ಯೂತ್ ಐಕಾನ್ ನಟ ನೀನಾಸಂ ಸತೀಶ್ ಕರೆ ನೀಡಿದರು.

ನಗರದ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿರುವ ಶಾರದಾ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಮತದಾರರ ಪಾಲ್ಗೊಳ್ಳುವಿಕೆ (ಸ್ವೀಪ್) ಕುರಿತು ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಸಮಾಜ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಈ ಮೂಲಕ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಮತದಾನ ಮಾಡುವುದು ಹಕ್ಕು ಹಾಗೂ ಕರ್ತವ್ಯ. ಮತದಾನದ ಮಹತ್ವದ ಬಗ್ಗೆ ಜ್ಞಾನ ಹೆಚ್ಚಿಸಿಕೊಂಡು, ಸಮಾಜಕ್ಕೆ ಏನಾದರೂ ಒಳ್ಳೆಯದು ಮಾಡುವ ನಿಟ್ಟಿನಲ್ಲಿ ಆಲೋಚನೆ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಯುವಕರು ಪ್ರಶ್ನೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕಿದೆ. ನಮ್ಮ ಸುತ್ತಮುತ್ತಲೂ ಇರುವ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚಿಂತಿಸಬೇಕಿದೆ. ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಳ್ಳಿ. ಉತ್ತಮ ವ್ಯಾಸಂಗ ಮಾಡುವ ಮೂಲಕ ಆ ಗುರಿ ಸಾಧಿಸಿ. ಈ ಮೂಲಕ ಸಮಾಜಕ್ಕೆ ನಮ್ಮಿಂದ ಏನಾದರೂ ಸಹಾಯ ಆಗಬೇಕು. ಆಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು. ಇದೇ ವೇಳೆ, ಚಲನಚಿತ್ರ ಗೀತೆಗಳು ಹಾಗೂ ಸಿನಿಮಾ ಡೈಲಾಗ್‌ಗಳನ್ನು ಹೇಳಿ ವಿದ್ಯಾರ್ಥಿಗಳನ್ನು ರಂಜಿಸಿದರು. ಬಳಿಕ ಮತದಾನ ಜಾಗೃತಿಯ ಸಹಿ ಅಭಿಯಾನದಲ್ಲಿ ಪಾಲ್ಗೊಂಡರು. ಈ ವೇಳೆ, ಮತದಾನದ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

ಕಳೆದ ವಿಧಾ‌ನಸಭೆ ಚುನಾವಣೆಯಲ್ಲಿ ಶೇಕಡವಾರು ಮತದಾನದಲ್ಲಿ‌ ಮಂಡ್ಯ ಜಿಲ್ಲೆ ಎರಡನೇ ಸ್ಥಾನದಲ್ಲಿತ್ತು. ಈ ಬಾರಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು. ಈಗಾಗಲೇ ಮತದಾರರಲ್ಲಿ ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ರಾಯಭಾರಿಗಳಾಗಿ ಚಲನಚಿತ್ರ ನಟ ನೀನಾಸಂ ಸತೀಶ್ ಹಾಗೂ ವಿಕಲಚೇತನ ರಾಯಭಾರಿಯಾಗಿ ಡಾ.ಚಲುವರಾಜ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಸುಶಿಕ್ಷಿತರು ಹಾಗೂ ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿರುವ ನಗರ ಪ್ರದೇಶಗಳಲ್ಲಿ ಶೇ.70 ರಷ್ಟು ಮತದಾನವಾಗುತ್ತಿದೆ. ಇಂತಹ ಕಡೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಇದೇ ವೇಳೆ, ಹೇಳಿದರು.

ಇದನ್ನೂ ಓದಿ : ಒಂದು ಕಡೆ ನಿಂತು ಗೆಲ್ಲುವುದೇ ಕಷ್ಟ, ನೀನೇಕೆ ಎರಡು ಕಡೆ ನಿಂತೆ?' ಸೋಮಣ್ಣಗೆ ಶ್ರೀನಿವಾಸ್ ಪ್ರಸಾದ್ ಪ್ರಶ್ನೆ!

Last Updated : Apr 13, 2023, 7:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.