ಮಂಡ್ಯ: ನಟ ಉಪೇಂದ್ರ ಮದ್ದೂರಿನ ಹೊಳೆ ಆಂಜನೇಯಸ್ವಾಮಿಯ ಮೊರೆ ಹೋಗಿದ್ದಾರೆ.
ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ವೇಳೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.
ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ದಿವಾಕರ್ ಗೌಡ ಪರ ಪ್ರಚಾರ ನಡೆಸುತ್ತಿರೋ ಉಪೇಂದ್ರ, ಇಂದು ಮಧ್ಯಾಹ್ನದವರೆಗೂ ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣದಲ್ಲಿ ಪ್ರಚಾರ ಮಾಡಲಿದ್ದಾರೆ. ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಕೂಡ ಇಲ್ಲಿಗೆ ಬಂದು ಹರಕೆ ಕಟ್ಟಿಕೊಂಡು ಪೂಜೆ ಸಲ್ಲಿಸಿದ್ದರು. ಈಗ ಉಪೇಂದ್ರ ಪೂಜೆ ಸಲ್ಲಿಸಿದ್ದಾರೆ.