ETV Bharat / state

ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ಗೂ ಕೊರೊನಾ.. ಎಫ್‌ಬಿಯಲ್ಲಿ ಖಚಿತಪಡಿಸಿದ ನಟಿ!! - ಅಂಬರೀಶ್​ಗೂ ಕಾಡಿದ ಕೊರೋನ

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖವಾಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ..

ಸುಮಲತಾ ಅಂಬರೀಶ್
ಸುಮಲತಾ ಅಂಬರೀಶ್
author img

By

Published : Jul 6, 2020, 6:40 PM IST

ಮಂಡ್ಯ : ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಂಸದೆ ಸುಮಲತಾ ಅಂಬರೀಶ್ ಅವರೇ ತಿಳಿಸಿದ್ದಾರೆ.

ಫೇಸ್​ಬುಕ್​ನಲ್ಲಿ ಪಾಸಿಟಿವ್ ಬಂದಿರುವುದನ್ನು ಅಭಿಮಾನಿಗಳಿಗೆ ತಿಳಿಸಿರುವ ಸುಮಲತಾ ಅಂಬರೀಶ್ ಅವರು, ಜುಲೈ 4 ಶನಿವಾರ ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೊಳಗಾದೆ. ಇಂದು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್​ಗೆ ಒಳಪಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ambereesh had corona positive
ಕೊರೊನಾ ಪಾಸಿಟಿವ್​ ಕುರಿತು ಫೇಸ್​ಬುಕ್​ನಲ್ಲಿ ಹೇಳಿಕೊಂಡಿರುವ ಸಂಸದೆ ಸುಮಲತಾ

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖವಾಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್​​ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಫೇಸ್​ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.