ಮಂಡ್ಯ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಂಸದ ಜಿ.ಮಾದೇಗೌಡ ಅವರ ಯೋಗಕ್ಷೇಮವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿಚಾರಿಸಿದರು.
ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಉಪಮುಖ್ಯಮಂತ್ರಿ, ಓರ್ವ ಹೋರಾಟಗಾರ, ಸಂಸದ ಹಾಗೂ ರಾಜಕೀಯ ನಾಯಕರಾಗಿ ಮಾದೇಗೌಡರು ಮಂಡ್ಯ ಮಾತ್ರವಲ್ಲದೆ, ಇಡೀ ರಾಜ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಆರೋಗ್ಯ ಸುಧಾರಿಸಿ ಬೇಗ ಅವರು ಮನೆಗೆ ಮರಳಲಿ ಎಂದು ಹಾರೈಸಿದರು.