ಮಂಡ್ಯ : ಪ್ರಸಿದ್ಧ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರವಾಗಿರುವ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಇಂದು ಮುಂಜಾನೆ 4.58ರ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಗಂಗಾಧರೇಶ್ವರಸ್ವಾಮಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರು ಮಹಾರಥೋತ್ಸವ ಕಣ್ಣುಂಬಿಕೊಂಡು ಜಯಘೋಷ ಮೊಳಗಿಸಿದರು.
ಗಂಗಾಧರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನ ರಥದಲ್ಲಿ ಕೂರಿಸುತ್ತಿದ್ದಂತೆ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪೂಜೆ ಸಲ್ಲಿಸಿದರು. ರಥ ಮುಂದೆ ಸಾಗುತ್ತಿದ್ದಂತೆ ಭಕ್ತರು ಹಣ್ಣು-ದವಸ ಎಸೆದು ಭಕ್ತಿ ಸಮರ್ಪಿಸಿದರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭಕ್ತರು ಅಡ್ಡಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಿದರು.
ಕೊರೊನಾ ಹಿನ್ನೆಲೆ ಕಳೆದ 2 ವರ್ಷ ಸರಳವಾಗಿಯೇ ರಥೋತ್ಸವ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ನಡೆಯಿತು. ವಿದ್ಯುತ್ ದೀಪಾಲಂಕಾರದಿಂದ ಆದಿಚುಂಚನಗಿರಿ ಕ್ಷೇತ್ರ ಕಂಗೊಳಿಸುತ್ತಿತ್ತು.
ಇದನ್ನೂ ಓದಿ: ಘೋಷಿತ ಕಾರ್ಯಕ್ರಮಗಳಿಗೆ ಅನುದಾನ ಕೊಟ್ಟು ಅನುಷ್ಠಾನಕ್ಕೆ ತರಲು ಬದ್ಧ: ಸಿಎಂ ಬೊಮ್ಮಾಯಿ