ಮಂಡ್ಯ: ಚುನಾವಣೆ ಹತ್ತಿರವಾಗುತ್ತಿದ್ದಂತೆ ನಾಗಮಂಗಲದಲ್ಲಿ ಪಡ್ಡೆ ಹುಡುಗರ ಓಲೈಕೆಗೆ ರಾಜಕಾರಣಿಗಳು ಮುಂದಾಗುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ನಾಗಮಂಗಲದಲ್ಲಿ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಅಶ್ಲೀಲವಾಗಿ ನೃತ್ಯ ಮಾಡಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈಗ ಮತ್ತೊಮ್ಮೆ ಅದೇ ರೀತಿಯ ಕಾರ್ಯಕ್ರಮ ನಡೆದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ನಾಗಮಂಗಲದ ತುಳಸಿ ಗ್ರಾಮದಲ್ಲಿ ಗ್ರಾಮದೇವತೆ ಹಬ್ಬಕ್ಕೆ ಹುಡುಗಿಯರನ್ನು ಕರೆತಂದು ಅಶ್ಲೀಲವಾಗಿ ಡ್ಯಾನ್ಸ್ ಮಾಡಿಸಿದ್ದಾರೆ. ಪಡ್ಡೆಹುಡುಗರ ಮತ ಸೆಳೆಯಲು ಕೆಲವು ರಾಜಕೀಯ ನಾಯಕರು ಮುಂದಾಗಿದ್ದಾರೆ ಎಂಬ ಮಾತು ಕೇಳಿ ಬಂದಿದೆ.
ಗ್ರಾಮ ದೇವತೆ ಹಬ್ಬಕ್ಕೆ ಬೇರೆಡೆಯಿಂದ ಹುಡುಗಿಯನ್ನು ಕರೆಸಿ ಆರ್ಕೇಸ್ಟ್ರಾ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹುಡುಗಿಯರು ಅರೆಬರೆ ಬಟ್ಟೆ ತೊಟ್ಟು ಮಾದಕ ನೃತ್ಯ ಮಾಡಿ ಗ್ರಾಮದ ಯುವಕರನ್ನು ಹುಚ್ಚೆಬ್ಬಿಸುವಂತೆ ಮಾಡಿದ್ದಾರೆ. ಪ್ರಮುಖ ರಾಜಕಾರಣಿಗಳ ಬೆಂಬಲಿಗರು ಗ್ರಾಮದಲ್ಲಿ ಪ್ರತ್ಯೇಕವಾಗಿ ಆರ್ಕೇಸ್ಟ್ರಾ ಕಾರ್ಯಕ್ರಮ ಆಯೋಜನೆ ಮಾಡಿಸಿದ್ರು ಎನ್ನಲಾಗಿದೆ.
ಓದಿ: ಉಕ್ರೇನ್ನಿಂದ ಪಾಕ್ ವಿದ್ಯಾರ್ಥಿನಿ ರಕ್ಷಣೆ.. ಮೋದಿ, ಭಾರತೀಯ ರಾಯಭಾರ ಕಚೇರಿಗೆ ಧನ್ಯವಾದ ಹೇಳಿದ ಅಸ್ಮಾ!
ಇದೇ ಸಂದರ್ಭದಲ್ಲಿ ಚಿಕ್ಕ ಬಾಲಕನೊಬ್ಬ ಮಾದಕ ಹುಡುಗಿಯರ ಕೈಗೆ ಸಿಲುಕಿ ಹೈರಾಣಾದ ಘಟನೆಯೂ ನಡೆದಿದೆ. ವೇದಿಕೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಶಾಲನ್ನೇ ಕಟ್ಟಿಕೊಂಡು ಡ್ಯಾನ್ಸ್ ಮಾಡಿದರು. ಇಬ್ಬರು ರಾಜಕಾರಣಿಗಳು ವೇದಿಕೆಗೆ ಬಂದು ಹೋದ ಬಳಿಕ ಮಾದಕ ನೃತ್ಯ ಶುರುವಾಯಿತು. ವಿಶ್ವ ಮಹಿಳಾ ದಿನಾಚರಣೆ ದಿನವೇ ಪಡ್ಡೆ ಹುಡುಗಿಯರನ್ನು ಕರೆಸಿ ಮಧ್ಯರಾತ್ರಿ ವರೆಗೂ ಮಾದಕ ನೃತ್ಯ ಕಾರ್ಯಕ್ರಮ ನಡೆಸಿದ್ದರಿಂದ ಸಾರ್ವಜನಿಕ ವಲಯದಲ್ಲಿ ಬಹಳಷ್ಟು ಟೀಕೆ ಕೇಳಿ ಬರುತ್ತಿವೆ.
ಈ ಹಿಂದೆ ಇದೇ ಕ್ಷೇತ್ರದಲ್ಲಿ ಮಾಜಿ ಸಂಸದರೊಬ್ಬರು ನಂಗಾನಾಚ್ ಮಾಡಿಸಿ ವ್ಯಾಪಕ ಟೀಕೆ ಮತ್ತು ಚರ್ಚೆಗೆ ಗ್ರಾಸವಾಗಿದ್ದರು. ಇದೀಗ ಮತ್ತೆ ಇದೇ ಕ್ಷೇತ್ರದಲ್ಲಿ ನಂಗಾನಾಚ್ ಸದ್ದು ಮಾಡ್ತಿದೆ.