ಮಂಡ್ಯ: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೀಡಿದ್ದ ಹೇಳಿಕೆ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯ ಪೊಲೀಸರು IPC354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ನಿಮಿತ್ತ ಆಯೋಜಿಸಿದ್ದ ಹನುಮ ಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದೂರು ಸಲ್ಲಿಸಲಾಗಿದೆ. ಪ್ರಭಾಕರ್ ಭಟ್ ವಿರುದ್ಧ ರೌಡಿಶೀಟ್ ತೆರೆಯುವಂತೆಯೂ ದೂರಿನಲ್ಲಿ ಆಗ್ರಹಿಸಿದ್ದಾರೆ.
''ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿ, ಸಾವು ನೋವುಗಳನ್ನ ಪ್ರಚೋದಿಸುವ ಆರೋಪದ ಹಿನ್ನೆಲೆ, ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ಪಟ್ಟಿಯಲ್ಲಿ ಸೇರಿಸಿ, ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಲಾಗಿದೆ.
ಇದನ್ನೂ ಓದಿ: 17 ವರ್ಷದ ಮಗಳ ಕೊಂದು ಶವ ಸುಟ್ಟು ಹಾಕಿದ ತಂದೆ; ಕೋಲಾರದಲ್ಲಿ ಮರ್ಯಾದಾ ಹತ್ಯೆ