ಮಂಡ್ಯ: ರಾಜಕೀಯ ದ್ವೇಷಕ್ಕೆ ಬಿಜೆಪಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಕೃಷ್ಣರಾಜಪೇಟೆ ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ.
ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನಾಗೇಶ್ ಎಂಬುವರಿಗೆ ಸೇರಿದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತ ತಡೆದಿದ್ದಾರೆ. ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಮೂನ್ನೆಯಷ್ಟೇ ಸಾಸಲು ಗ್ರಾಮಕ್ಕೆ ಆಗಮಿಸಿದ್ದರು. ಸ್ವಾಗತ ಕೋರಿ ಹಾಕಿದ್ದ ಫ್ಲೆಕ್ಸ್‌ಗೂ ಸೆಗಣಿ ಬಳಿದಿದ್ದು, ರಾಜಕೀಯ ದ್ವೇಷಕ್ಕೆ ಹೀಗೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಈ ಕುರಿತು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.