ಮಂಡ್ಯ: ಮರಕ್ಕೆ ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ರಸ್ತೆಯಲ್ಲಿ ನಡೆದಿದೆ.
ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ವಾಯುವಿಹಾರಕ್ಕೆ ತೆರಳುತ್ತಿದ್ದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಓದಿ : ಕೊಡಗಿನಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣ: ತನಿಖೆ ತೀವ್ರಗೊಳಿಸಿದ ಪೊಲೀಸರು
ಮಂಡ್ಯ ಪಶ್ವಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಕೇಸ್ ದಾಖಲಾಗಿದೆ.