ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಗರಕ್ಕೆ ಆಗಮಿಸಿದ್ದಾರೆ.

ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚಂದ್ರಬಾಬು ನಾಯ್ಡು ಆಗಮಿಸಿದ್ದು, ಅವರೊಂದಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ವೇದಿಕೆ ಹಂಚಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಅನೇಕ ವಿದೇಶಿ ಮಾಧ್ಯಮಗಳು ಮೋದಿ ಆಡಳಿತ ಅವಧಿಯಲ್ಲಿ ಭಾರತದ ಆರ್ಥಿಕತೆ ಕುಗ್ಗಿದೆ. ಮಹಿಳೆಯರಿಗೆ, ಅಮಾಯಕರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ವರದಿ ಮಾಡಿವೆ. ದೇಶದಲ್ಲಿ ಪ್ರಜಾಪ್ರಭುತ್ವ ಇಂದು ಆತಂಕದಲ್ಲಿದೆ, ಆತಂಕಕ್ಕೆ ದೂಡಿರುವವರು ನರೇಂದ್ರ ಮೋದಿ ಎಂದು ದೂರಿದರು.