ಮಂಡ್ಯ: ಸರಿಯಾಗಿ ವಿದ್ಯುತ್ ಬಿಲ್ ಪಾವತಿಸಿಲ್ಲದ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ತೆರಳಿದ್ದ ಸೆಸ್ಕಾಂ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾದ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಸೆಸ್ಕಾಂನಲ್ಲಿ ಕೆಲಸ ಮಾಡುವವರಿಗೆ ಜೀವ ಬೆದರಿಕೆ ಇದೆ. ಸರ್ಕಾರಿ ಕೆಲಸದಲ್ಲಿ ಇರುವವರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಸಾರ್ವಜನಿಕರು ಹೇಗೆ ವರ್ತಿಸಿದರೂ ಸಹಿಸಿಕೊಂಡು ಸುಮ್ಮನೆ ಇರುವ ಪರಿಸ್ಥಿತಿ ಇದೆ ಎಂದು ಸೆಸ್ಕಾಂ ಸಿಬ್ಬಂದಿ ಅಳಲು ತೋಡಿಕೊಂಡರು.