ಮಂಡ್ಯ: ಸಾಮಾಜಿಕ ಅಂತರ ಕಾಪಾಡಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ ಘಟನೆ, ಕೆ.ಆರ್. ಪೇಟೆ ತಾಲೂಕಿನ ಕೊಡಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊರೊನಾ ವಾರಿಯರ್ಸ್ ಆಶಾ ಕಾರ್ಯಕರ್ತೆ ಶೋಭಾ ಎಂಬುವವರ ಮೇಲೆ ಕೊಡಗಹಳ್ಳಿ ಗ್ರಾಮದ ಮಂಜೇಗೌಡ, ರುದ್ರೇಶ್, ನಿಖಿಲ್, ಪ್ರಿಯಾಂಕ ಮತ್ತು ಗೀತಾ ಎಂಬುವರು ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.
ಮಂಜೇಗೌಡ ಮತ್ತು ಕುಟುಂಬ ಕ್ವಾರಂಟೈನ್ ಅವಧಿ ಮುಗಿಸಿ ಗ್ರಾಮಕ್ಕೆ ಆಗಮಿಸಿದ್ದರು. ಈ ಸಂದರ್ಭ ಅವರ ಮನೆಗೆ ಆಶಾ ಕಾರ್ಯಕರ್ತೆ ಆಗಮಿಸಿ ಸೂಚನೆ ನೀಡುತ್ತಿದ್ದ ಸಂದರ್ಭದಲ್ಲಿ ಹಲ್ಲೆ ಮಾಡಲಾಗಿದೆ ಎಂದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿದೆ.