ಮಂಡ್ಯ: ಜೀತ ಪದ್ಧತಿಯ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವ್ಯಕ್ತಿಯ ಮೇಲೆ ಮಹಿಳೆಯರು ಹಲ್ಲೆ ಮಾಡಿದ ಘಟನೆ ಮದ್ದೂರು ತಾಲೂಕಿನ ಚಿಕ್ಕಮರೀಗೌಡನ ದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದ ಮುತ್ತೇಶ್ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ತಮ್ಮ ಗ್ರಾಮದಲ್ಲಿ ಜೀತ ಪ್ರಕರಣ ಜೀವಂತವಾಗಿದೆ ಎಂದು ಮುತ್ತೇಶ್, ಅಧಿಕಾರಿಗಳ ಗಮನಕ್ಕೆ ತಂದಿದ್ದರು ಎಂದು ಹೇಳಲಾಗಿದೆ. ಈ ವಿಚಾರವಾಗಿ ಗ್ರಾಮದಲ್ಲಿ ಸಾಮರಸ್ಯ ಹಾಳು ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯರು ಹಲ್ಲೆ ಮಾಡಿದ್ದಾರೆ.
ಅಧಿಕಾರಿಗಳು ದೂರಿನ ಅನ್ವಯ ವಿಚಾರಣೆ ಮಾಡಲು ಗ್ರಾಮಕ್ಕೆ ಆಗಮಿಸಿದ ವೇಳೆ, ಮಹಿಳೆಯರೇ ಮುತ್ತೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಕೆ.ಎಂ. ದೊಡ್ಡಿ ಪೊಲೀಸರಿಗೆ ದೂರು ನೀಡಿರುವ ಮುತ್ತೇಶ್, ತನಿಖೆ ನಡೆಬೇಕು ಎಂದು ಒತ್ತಾಯಿಸಿದ್ದಾರೆ.