ಮಂಡ್ಯ: ಬಾಲಕಿ ಮೇಲೆ 48 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದಲ್ಲಿ ನಡೆದಿದೆ.
ಆಟವಾಡುತ್ತಿದ್ದ ಬಾಲಕಿಯನ್ನು ತಿಂಡಿ ಕೊಡಿಸುವ ನೆಪ ಮಾಡಿ ಪ್ರಕಾಶ್(49) ಎಂಬಾತ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗುವ ಸಂದರ್ಭದಲ್ಲಿ ಬಾಲಕಿ ಕಿರುಚಿಕೊಂಡು ಹೊರ ಬಂದಿದ್ದಾಳೆ.
ವಿಚಾರ ತಿಳಿದ ಸ್ಥಳೀಯರು ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಪ್ರಕರಣ ದಾಖಲು ಮಾಡಿಕೊಂಡ ಮದ್ದೂರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.