ಮಂಡ್ಯ: ದಸರಾ ಹಿನ್ನೆಲೆಯಲ್ಲಿ ಭಯೋತ್ಪಾದಕರ ಕರಿನೆರಳು ಜಿಲ್ಲೆಯಲ್ಲಿ ಬಿದ್ದಿದೆ ಎಂದು ವದಂತಿ ಹಬ್ಬಿರುವ ಕಾರಣ ಜಿಲ್ಲೆಯ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಶ್ರೀರಂಗಪಟ್ಟಣ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ತಪಾಸಣೆ ಶುರು ಮಾಡಿದ್ದಾರೆ. ರೆಸಾರ್ಟ್, ಲಾಡ್ಜ್, ಫಾರ್ಮ್ ಹೌಸ್‌ಗಳಲ ಸುತ್ತಮುತ್ತಲೂ ಮುನ್ನೆಚ್ಚರಿಕೆ ವಹಿಸಿದ್ದಾರೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕದ ಮಾಹಿತಿ ಹಾಗೂ ಮೈಸೂರು ದಸರಾ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ.