ETV Bharat / state

ಮದ್ದೂರು ಬಳಿ ಡಿವೈಡರ್​ಗೆ ಬೈಕ್ ಡಿಕ್ಕಿ: ಇಬ್ಬರು ಯುವತಿಯರು ಸಾವು

author img

By

Published : Apr 24, 2022, 6:57 PM IST

ಡಿವೈಡರ್​ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದೆ.

ಮದ್ದೂರು ಬಳಿ ಡಿವೈಡರ್​ಗೆ ಬೈಕ್ ಡಿಕ್ಕಿ
ಮದ್ದೂರು ಬಳಿ ಡಿವೈಡರ್​ಗೆ ಬೈಕ್ ಡಿಕ್ಕಿ

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಹಿಂಬದಿ ಕುಳಿತಿದ್ದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದ ಬಳಿ ನಡೆದಿದೆ. ಮಳವಳ್ಳಿ-ಮದ್ದೂರು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿತು. ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಯುವತಿಯರಿಬ್ಬರು ಸಾವನ್ನಪ್ಪಿದ್ದಾರೆ.

ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆ‌.ಎಂ.ದೊಡ್ಡಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈಕ್ ಸವಾರ ಹಾಗೂ ಯುವತಿಯರ ಹೆಸರು ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ: ಮಂಗಳೂರು: ನೀರಿನಲ್ಲಿ ಡೈವ್​ ಹೊಡೆಯುವಂತೆ ಲಾರಿಯಡಿಗೆ ಜಿಗಿದ ಯುವಕ! ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.