ಮಂಡ್ಯ: ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ನಡೆದಿದೆ.
ಬೆಂಗಳೂರು ಕಡೆಯಿಂದ ಮೈಸೂರಿನ ಕಡೆ ಹೋಗುತ್ತಿದ್ದ ಪಲ್ಸರ್ ಬೈಕ್ ಹೆದ್ದಾರಿಗೆ ತಿರುವು ಪಡೆಯುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಮೃತರು ಚಿತ್ರದುರ್ಗದ ಸೋಮು ಹಾಗೂ ಬೆಂಗಳೂರಿನ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ.
ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.