ಮಂಡ್ಯ: ಪ್ರಧಾನಿ ನರೇಂದ್ರ ಮೋದಿ 72ನೇ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮಂಡ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಮಾಡಿದ ಬಿಜೆಪಿ ಕಾರ್ಯಕರ್ತರು.
ಬಿಜೆಪಿ ಮುಖಂಡ ಚಂದಗಾಲು ಶಿವಣ್ಣ ನೇತೃತ್ವದಲ್ಲಿ ಬಸ್ ನಿಲ್ದಾಣದ ಆವರಣ ಹಾಗೂ ಶೌಚಾಲಯ ಸ್ವಚ್ಚಗೊಳಿಸಿದ ಬಿಜೆಪಿ ಕಾರ್ಯಕರ್ತರು ಕಸಗುಡಿಸುವ ಮೂಲಕ ಬಸ್ ನಿಲ್ದಾಣವನ್ನು ಸ್ವಚ್ಛ ಗೊಳಿಸಿದರು. ಬಳಿಕ ಪೌರಕಾರ್ಮಿಕರಿಗೆ ಪುಷ್ಪವೃಷ್ಟಿ ಮೂಲಕ ಅಭಿನಂದನೆ ಸಲ್ಲಿಸಿದರು.
ಈ ಕುರಿತು ಬಿಜೆಪಿ ಕಾರ್ಯಕರ್ತ ಮಾತನಾಡಿ, ಮೋದಿ ಅವರ ಆಶಯದಂತೆ ಸ್ವಚ್ಚತಾ ಕಾರ್ಯ ಮಾಡುತ್ತಿದ್ದೇವೆ.
ಇನ್ನು ಅವರ ಹುಟ್ಟಿದ ದಿನವಾದ ಇಂದು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇದನ್ನೂ ಓದಿ: ಮೋದಿ ಹುಟ್ಟುಹಬ್ಬ: ರಕ್ತದಾನ ಮಾಡಿದ ಆರೋಗ್ಯ ಸಚಿವ, ಕಸಗೂಡಿಸಿದ ರೈಲ್ವೆ ಮಂತ್ರಿ