ಮಂಡ್ಯ: ಚಿನ್ನದ ವ್ಯಾಪಾರಿ ಹಾಗೂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದ ಎನ್ನಲಾದ ವಿಡಿಯೋ ಹಾಗೂ ಆಡಿಯೋ ವೈರಲ್ ಆಗಿದೆ. ಇದರಿಂದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಮೈಸೂರಿನ ಲಾಡ್ಜ್ನಲ್ಲಿ ಯುವತಿ ಜೊತೆ ಜಗನ್ನಾಥ್ ಶೆಟ್ಟಿ ಇದ್ದ ವೇಳೆ ಲಾಡ್ಜ್ಗೆ ಏಕಾಏಕಿ ಸಲ್ಮಾ ಗ್ಯಾಂಗ್ ನುಗ್ಗಿ, ಹಲ್ಲೆ ಮಾಡಿರುವುದು ವಿಡಿಯೋದಲ್ಲಿದೆ. ಜೊತೆಗೆ ಯುವತಿ ಜಗನ್ನಾಥ್ ಶೆಟ್ಟಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಮಂಡ್ಯ ಪಶ್ಚಿಮ ವಿಭಾಗ ಠಾಣೆಯಲ್ಲಿ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಅವರು ಹನಿ ಟ್ರ್ಯಾಪ್ ದೂರು ದಾಖಲಿಸಿದ ಬಳಿಕ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ.
ಸದ್ಯ ವಿಡಿಯೋ ಮತ್ತು ಆಡಿಯೋ ವೈರಲ್ ಆಗಿರುವುದರಿಂದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಂತಾಗಿದೆ.
(ಇದನ್ನೂ ಓದಿ: ಹನಿಟ್ರ್ಯಾಪ್ ಸುಳಿಗೆ ಸಿಲುಕಿದ ಪ್ರತಿಷ್ಠಿತ ಚಿನ್ನದ ವ್ಯಾಪಾರಿ: ಆರು ತಿಂಗಳ ಬಳಿಕ ದೂರು ದಾಖಲು)