ETV Bharat / state

ಮಾ.12ಕ್ಕೆ ಮಂಡ್ಯಗೆ ಪ್ರಧಾನಿ ಮೋದಿ ಭೇಟಿ: ಪಕ್ಷದ ಮುಖಂಡರು, ಅಧಿಕಾರಿಗಳೊಂದಿಗೆ ಸಚಿವ ಪ್ರಹ್ಲಾದ್ ಜೋಶಿ ಪೂರ್ವಭಾವಿ ಸಭೆ

ಮಂಡ್ಯದಲ್ಲಿ ಬಿಜೆಪಿ ಪಕ್ಷದ ಸಾರ್ವಜನಿಕ ಬೃಹತ್​ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆ ಇಂದು ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಪ್ರಹ್ಲಾದ್​ ಜೋಶಿ ಪರೀಶಿಲಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
author img

By

Published : Mar 3, 2023, 6:25 PM IST

ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹೇಳಿಕೆ

ಮಂಡ್ಯ: ಮಾರ್ಚ್ 12ರಂದು ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯನ್ನು ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದು, ಈ ಹಿನ್ನೆಲೆ ಕಾರ್ಯಕ್ರಮದ ಸಿದ್ದತೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ದಶಪಥ ಹೆದ್ದಾರಿ ಉದ್ಘಾಟನೆ ನಂತರ ಬೃಹತ್ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮ ಭರ್ಜರಿ ಯಶಸ್ಸು ಕಾಣಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಈಗಾಗಲೇ ಬೆಳಗಾವಿ, ಹುಬ್ಬಳ್ಳಿ ನಗರಗಳಲ್ಲಿ ಬೃಹತ್ ಸಮಾವೇಶಗಳು ನಡೆದಿವೆ. ಆ ಎರಡು ಕಾರ್ಯಕ್ರಮಗಳಿಗಿಂತ ಮಂಡ್ಯದ ಕಾರ್ಯಕ್ರಮ ಬಹುದೊಡ್ಡ ಕಾರ್ಯಕ್ರಮವಾಗಬೇಕು. ಹೀಗಾಗಿ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಮನೆಯಿಂದ ಒಬ್ಬೊಬ್ಬ ಕಾರ್ಯಕರ್ತರನ್ನು ಕರೆತರುವ ವ್ಯವಸ್ಥೆ ಮಾಡಬೇಕು ಎಂದರು. ಕಾಂಗ್ರೆಸ್ ಕಾರ್ಯಕ್ರಮಗಳಿಗೆ 500 ರೂ. ಕೊಟ್ಟು ಕರೆತನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಆದರೆ, ನಮ್ಮ ಪಕ್ಷದಲ್ಲಿ ಯಾವ ಕಾಲಕ್ಕೂ ಆ ರೀತಿ ಮಾಡಿಲ್ಲ. ನಮ್ಮ ಪಕ್ಷದಲ್ಲಿ ಮೋದಿ, ಅಮಿತ್ ಶಾ ಬಂದರೇ ಕಾರ್ಯಕರ್ತರು ತಾವಾಗಿಯೇ ಬರ್ತಾರೆ ಎಂದು ಹೇಳಿದರು.

ಮಂಡ್ಯದ ರೋಡ್​ ಶೋ ಬೆಸ್ಟ್​​ ಶೋ ಆಗಬೇಕು: ಬಳಿಕ ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಜಿಲ್ಲೆಗೆ ನಮ್ಮ ಹೆಮ್ಮೆಯ ಪ್ರಧಾನಿಗಳು ಬರ್ತಿದ್ದಾರೆ. ಕರ್ನಾಟಕದಲ್ಲಿ ನಡೆದ ರೋಡ್ ಶೋಗಳಿಗಿಂತ ಮಂಡ್ಯದ ರೋಡ್​ ಶೋ ಬೆಸ್ಟ್​​ ಶೋ ಆಗಬೇಕು. ಇಡೀ ದೇಶವೇ ಮಂಡ್ಯವನ್ನು ತಿರುಗಿ ನೋಡುವಂತೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪ್ರಧಾನಿ ಮೋದಿ ಜಿಲ್ಲೆಗೆ ಶಕ್ತಿ ತುಂಬಲು ಬರ್ತಿದ್ದಾರೆ: ನಂತರ ಮೈಸೂರು, ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿ, ಮಂಡ್ಯ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿವೆ. ದಶಪಥ ಹೆದ್ದಾರಿಗೆ ಮಂಡ್ಯ ಜನರ ಬಹುದೊಡ್ಡ ಕೊಡುಗೆ ಇದೆ. ಹೆದ್ದಾರಿಯಿಂದ ಜಿಲ್ಲೆಯ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ. ಈಗಾಗಲೇ ಜಿಲ್ಲೆಗೆ ಜಲಜೀವನ್ ಮಿಷನ್ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ.

ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ಜಿಲ್ಲಿಗೆ ಕೊಡಲಾಗಿದೆ. ಮುಂದಿನ ದಿನಗಳಲ್ಲಿ ಇಂಗ್ಲೇಂಡ್ ಕಂಟೆನರ್ ಡಿಪೋ ಕೂಡ ಜಿಲ್ಲೆಗೆ ಕಾಲಿಡಲಿದೆ. ಹೀಗೆ ಇನ್ನು ಹಲವಾರು ಕೊಡುಗೆಗಳನ್ನು ನರೇಂದ್ರ ಮೋದಿ ಅವರ ಸರ್ಕಾರ ಜಿಲ್ಲೆಗೆ ನೀಡಿದೆ. ನರೇಂದ್ರ ಮೋದಿ ಅವರು ಜಿಲ್ಲೆಗೆ ಶಕ್ತಿ ತುಂಬಲು ಬರ್ತಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಕೂಡ ಬಿಜೆಪಿ ಬಾವುಟವನ್ನು ಹಾರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಒಟ್ಟಾರೆ ಮಂಡ್ಯಕ್ಕೆ ಮೋದಿ ಆಗಮನಕ್ಕೆ ಸರ್ಕಾರ ಹಾಗೂ ಬಿಜೆಪಿ ನಾಯಕರು ಸಕಲ ಸಿದ್ದತೆ ಮಾಡ್ಕೊಳ್ತಿದ್ದಾರೆ, ಜೆಡಿಎಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ ರೂಪಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.