ಮಂಡ್ಯ: ಅಕ್ರಮ ಗಣಿಗಾರಿಕೆ ಇದ್ದದ್ದು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ, ಅದನ್ನು ನಮ್ಮ ಸಿಎಂ ಯಡಿಯೂರಪ್ಪ ತಡೆಗಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದರು.
ಓದಿ: ಗೋಹತ್ಯೆ ನಿಷೇಧ ಕಾಯ್ದೆ ಎಫೆಕ್ಟ್ : ಅರೆಹೊಟ್ಟೆಯಲ್ಲೇ ದಿನದೂಡುತ್ತಿವೆ ಮೃಗಾಲಯ ಪ್ರಾಣಿಗಳು
ಮದ್ದೂರು ತಾಲೂಕು ಮಲ್ಲನಕುಪ್ಪೆ ಗೇಟ್ ಬಳಿ ಮಾತನಾಡಿದ ಅವರು, ದೆಹಲಿ ರೈತರ ಪ್ರತಿಭಟನೆಯನ್ನ ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.
ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡವರು ಈ ರೀತಿಯ ಮಾತುಗಳನ್ನಾಡುತ್ತಾರೆ. ರೈತರ ಹೋರಾಟದ ದಿಕ್ಕು ತಪ್ಪಿಸುವ ಕೆಲಸವನ್ನ ರಾಜಕೀಯ ಪಕ್ಷಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರೈತರ ಹೆಸರಲ್ಲಿ ಮಾಡುತ್ತಿರುವ ರಾಜಕೀಯ ಹೋರಾಟ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕುಟುಕಿದರು.