ETV Bharat / state

ಮೈಸೂರು ಗ್ಯಾಂಗ್​​ರೇಪ್ ಕೇಸ್​​: ಸಿ ಟಿ ರವಿ ಹೇಳಿದ್ದಿಷ್ಟು

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿಟಿ ರವಿ
CT Ravi
author img

By

Published : Aug 25, 2021, 4:54 PM IST

Updated : Aug 25, 2021, 8:39 PM IST

ಮಂಡ್ಯ: ಒಂದು, ಎರಡು ಪ್ರಕರಣಗಳಿಂದ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮೈಸೂರು ಗ್ಯಾಂಗ್​​ರೇಪ್ ಪ್ರಕರಣ ಕುರಿತಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿ ಪ್ರಕರಣಗಳು ಸಾಂಸ್ಕೃತಿಕ ನಗರಿಗೆ ಕಪ್ಪು ಚುಕ್ಕೆ ತರುತ್ತವೆ. ಬಹಳ ಗಂಭೀರವಾಗಿ ಈ ಕೇಸ್​ ಅನ್ನು ಸರ್ಕಾರ ಪರಿಗಣಿಸುತ್ತದೆ. ಒಂದೆರಡು ಪ್ರಕರಣಗಳಿಂದ ಸುವ್ಯವಸ್ಥೆ ದೂರುವುದು ಸರಿಯಲ್ಲ ಎಂದರು.

ಮೈಸೂರು ಗ್ಯಾಂಗ್​​ರೇಪ್ ಕೇಸ್​​: ಸಿ ಟಿ ರವಿ ಹೇಳಿದ್ದಿಷ್ಟು

ನನಗೆ ಆ ಪ್ರಕರಣದ ಬಗ್ಗೆ ಪರಿಪೂರ್ಣ ಮಾಹಿತಿ ಇಲ್ಲ. ಆದರೆ, ಇದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಆಸ್ತಿ ನಿರ್ವಹಣೆ ಹೆಸರಲ್ಲಿ ಬಿಳಿ ಆನೆ ಸಾಕುವ ಆಸಕ್ತಿ ಇಲ್ಲ:

ಕೇಂದ್ರ ಸರ್ಕಾರ ನಗದೀಕರಣ ಯೋಜನೆಯಿಂದ ಆಸ್ತಿಯನ್ನು ಉತ್ಪಾದನಾ ಘಟಕವಾಗಿ ಪರಿವರ್ತಿಸಲು ಮುಂದಾಗಿದೆ. ಆದರೆ ಆಸ್ತಿ ನಿರ್ವಹಣೆ ಹೆಸರಲ್ಲಿ ಬಿಳಿ ಆನೆ ಸಾಕುವ ಆಸಕ್ತಿ ಇಲ್ಲ. ಆಸ್ತಿ ನಗದೀಕರಣ ಮಾಡುವ ಯೋಜನೆ 1991ರಿಂದಲೂ ನಡೆಯುತ್ತಿದೆ. ಆದರೆ ಹಿಂದೆ ಆಸ್ತಿ ನಿರ್ವಹಣೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿತ್ತು. ಭ್ರಷ್ಟಾಚಾರದಿಂದ ಹೊರತರುವುದು ಹಾಗೂ ಉತ್ಪಾದನಾ ಘಟಕವಾಗಿ ಪರಿವರ್ತಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಅಭಿವೃದ್ಧಿಗೆ ವೇಗ ಸಿಕ್ಕಿದೆ. ದೇಶದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಕೇವಲ ಭ್ರಷ್ಟಾಚಾರವೇ ತುಂಬಿತ್ತು. ಆದರೆ ಅಭಿವೃದ್ಧಿ ಕುಂಠಿತವಾಗಿತ್ತು ಎಂದರು.

ಮೇಕೆದಾಟು ಯೋಜನೆ ಜಾರಿಗೊಳಿಸಲು ಸರ್ಕಾರ ಬದ್ಧ:

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಆದರೆ ನೆರೆಯ ರಾಜ್ಯಗಳ ನಡುವೆ ಯಾವುದೇ ರೀತಿಯ ಗಲಾಟೆ ಇಲ್ಲದೆ, ಶಾಂತಿಯುತವಾಗಿ ಇತ್ಯರ್ಥಪಡಿಸಿಕೊಳ್ಳುವ ಅವಶ್ಯಕತೆ ಇದೆ. ಕಾವೇರಿ ನೀರಿನ ಹಂಚಿಕೆಯಾಗಿದ್ದು, ನಮ್ಮ ನೀರನ್ನು ನಾವು ಬಳಸಿಕೊಳ್ಳಲು ಸುಪ್ರೀಂಕೋರ್ಟ್ ಸಹ ಮಧ್ಯ ಪ್ರವೇಶಿಸಲು ಅವಕಾಶವಿಲ್ಲ ಎಂದು ಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸಿದರು.

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ:

ಇಂದಿರಾ ಕ್ಯಾಂಟೀನ್‌ನ ಹೆಸರನ್ನು ಅನ್ನಪೂರ್ಣ ಕ್ಯಾಂಟೀನ್ ಎಂದು ಬದಲಾಯಿಸುತ್ತೇವೆ. ಕಾಂಗ್ರೆಸ್‌ನವರು ಪಕ್ಷದ ನಾಯಕಿಯ ಹೆಸರು ಇಟ್ಟಿದ್ದಾರೆ. ನಾವು ರಾಜಕಾರಣ ಹೊರತುಪಡಿಸಿ ಹೆಸರಿಡಲು ಮುಂದಾಗಿದ್ದೇವೆ. ಅನ್ನಪೂರ್ಣ ಎಂಬ ಹೆಸರು ನಮ್ಮ ಪಕ್ಷದಲ್ಲಿ ಯಾವ ನಾಯಕಿಯರ ಹೆಸರೂ ಇಲ್ಲ. ಕಾಂಗ್ರೆಸ್ ಸರ್ಕಾರ ದೇಶದಲ್ಲಿ 216 ಯೋಜನೆಗಳಿಗೆ ಒಂದೇ ಕುಟುಂಬದ ಹೆಸರಿಟ್ಟಿದೆ. ಹಾಗಾದರೆ ಬೇರೆಯವರ ಕೊಡುಗೆ ಏನು ಇಲ್ಲವೇ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್‌ನವರು ತಮ್ಮ ಪಕ್ಷದ ನಾಯಕರ ಹೆಸರಿಟ್ಟು ಅವರಿಲ್ಲದೆ ದೇಶವೇ ಇಲ್ಲವೆಂಬ ಭ್ರಮೆ ಸೃಷ್ಟಿಸಿದ್ದಾರೆ. ಅದಕ್ಕೆ ನಮ್ಮ ವಿರೋಧವಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ತಾರತಮ್ಯವಾಗಿಲ್ಲ:

ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ತಾರತಮ್ಯ ಮಾಡಿಲ್ಲ. ಇತ್ತೀಚಿಗೆ 8 ಸಾವಿರ ಕೋಟಿ ರೂ. ಕರ್ನಾಟಕದ ಪಾಲು ಬಿಡುಗಡೆ ಮಾಡಿದ್ದಾರೆ. ಕೆಲವರಿಗೆ ಸುಳ್ಳೇ ಮನೆ ದೇವರು, ಸುಳ್ಳನ್ನೇ ಸತ್ಯ ಎಂದು ಹೇಳುತ್ತಾರೆ. 2 ವರ್ಷದ ಹಿಂದಿನ ಅಪಘಾತ ಪ್ರಕರಣದಲ್ಲಿ ಎಲ್ಲ ಕುಡುಕರು ಸೇರಿ ನನಗೆ ಕುಡುಕನ ಪಟ್ಟ ಕಟ್ಟಿದ್ದರು. ಹಾಗೆಯೇ ಜಿಎಸ್‌ಟಿ ವಿಚಾರದಲ್ಲೂ ಸುಳ್ಳು ಆರೋಪ ಮಾಡಲಾಗುತ್ತಿದೆ. ಆದರೆ ವಾಸ್ತವವಾಗಿ ಕರ್ನಾಟಕದ ಪಾಲನ್ನು ಕೇಂದ್ರ ಬಿಡುಗಡೆ ಮಾಡಿದೆ ಎಂದು ಸಮರ್ಥಿಸಿಕೊಂಡರು.

ಮೇಕೆದಾಟು ಯೋಜನೆ ಜಾರಿಗೊಳಿಸಲು ಸರ್ಕಾರ ಬದ್ಧ: ಸಿ ಟಿ ರವಿ

ಯಾರಿಗೆ ಕಿಮ್ಮತ್ತು ಕೊಡಬೇಕೋ ಕೊಡಿ:

ಬೆಂಗಳೂರು-ಮೈಸೂರು ದಶಪಥ ರಸ್ತೆ ಯೋಜನೆ ಕ್ರೆಡಿಟ್ ಪಡೆಯಲು ಕಿತ್ತಾಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವರು ಚಂದ್ರಲೋಕದ ಸೈಟಿಗೆ ಈಗಲೇ ಅರ್ಜಿ ಹಾಕಿಸಿ ಬಿಡುತ್ತಾರೆ. ಈಗಲೇ ಹೋಗಿ ಅಲ್ಲಿ ಮನೆ ಕಟ್ಟೋಕ್ಕಾಗುತ್ತಾ?, ಕೆಲವರು ಅರ್ಜಿ ಹಾಕಿ ಕೊನೆಗೆ ನಾನೇ ಅರ್ಜಿ ಕೊಟ್ಟಿದ್ದೆ ಅಂತಾರೆ. ಆದರೆ ಅರ್ಜಿ ಕಿಮ್ಮತ್ತೇನು, ಹಣ ಬಿಡುಗಡೆಯಾಗಿದ್ದು ಯಾವಾಗ, ಮಂಜೂರಾಗಿದ್ದು ಯಾವಾಗ?, ಅರ್ಜಿ ಸಲ್ಲಿಸಿದವರಿಗೆ ಏನು ಕಿಮ್ಮತ್ತು ಕೊಡಬೇಕೋ ಕೊಡಿ, ಹಣ ಬಿಡುಗಡೆ ಮಾಡಿ, ಕೆಲಸ ಪ್ರಾರಂಭ ಮಾಡಿದವರಿಗೆ ಏನು ಕಿಮ್ಮತ್ತು ಕೊಡಬೇಕೋ ಕೊಡಿ ಎಂದು ಹೇಳಿದರು.

ಓದಿ: ಮೈಸೂರು: ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ Gangrape

Last Updated : Aug 25, 2021, 8:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.