ಮಂಡ್ಯ: ಜಮೀನು ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ರೋಟ್ರಿಗೆ ಸಿಲುಕಿ ಬಾಲಕ ಸಾವಿಗೀಡಾದ ಘಟನೆ ಪಾಂಡವಪುರ ತಾಲೂಕಿನ ಬಿಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿಕಾಂತ್ (13)ಮೃತ ಬಾಲಕನಾಗಿದ್ದು, ಮಧ್ಯಾಹ್ನ ಉಳುಮೆ ಮಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಕೆಆರ್ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.