ಮಂಡ್ಯ: ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಕೆ.ಆರ್.ಪೇಟೆಯಲ್ಲಿರುವ ಅಖಿಲ ಚಕ್ರವರ್ತಿ ಸಾರ್ವಭೌಮ ಶ್ರೀ ಸ್ವತಂತ್ರ ಸಿದ್ದಲಿಂಗೇಶ್ವರ ಶಿವಯೋಗಿಗಳ ಮಠ(ಗವಿಮಠ)ಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.
ಮಹಿಳೆಯರು ಪೂರ್ಣಕುಂಭದೊಂದಿಗೆ ಸಿಎಂಗೆ ಸ್ವಾಗತ ಕೋರಿದರು. ನಂತರ ಸಿದ್ದಲಿಂಗೇಶ್ವರ ಮಠಕ್ಕೆ ಪೂಜೆ ಸಲ್ಲಿಸಿ ಪ್ರಾರ್ಥಿಸಿ, ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.
ಪೂಜೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಇಲ್ಲಿಗೆ ಪೂಜೆ ಸಲ್ಲಿಸಲು ಬಂದಿರುವೆ. ರಾಜಕೀಯ ಮಾತನಾಡುವುದಿಲ್ಲ.ರಾಜ್ಯದ ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ ಎಂದರು.