ಮಂಡ್ಯ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬನ್ನಹಳ್ಳಿ ಗ್ರಾಮದ ಸತೀಶ್(17), ಮಹೇಂದ್ರ (16) ಸಾವಿಗೀಡಾದ ವ್ಯಕ್ತಿಗಳು. ಖಾಸಗಿ ಬಸ್ ಓವರ್ ಟೇಕ್ ಮಾಡಲು ಹೋಗಿ ಎದುರು ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ, ಬೈಕ್ ಡಿಕ್ಕಿ ಹೊಡೆದಿದೆ.
ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.