ಮಂಡ್ಯ: ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆ ಬಸ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು, ಬಸ್ಸಿನಲ್ಲಿದ್ದ ಸುಮಾರು 40 ಮಂದಿಗೆ ಗಾಯವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಪ್ರಯಾಣಿಕರನ್ನ ಇಳಿಸುವ ವೇಳೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದು ಘಟನೆ ನಡೆದಿದ್ದು, 20ಕ್ಕೂ ಹೆಚ್ಚು ಮಂದಿಗೆ ಮೂಳೆ ಮುರಿತವಾಗಿದೆ. ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ನೌಕರರಿದ್ದರು ಎನ್ನಲಾಗಿದೆ.
ಇನ್ನೂ ಎಲ್ಲಾ ಗಾಯಾಳುಗಳಿಗೆ ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.