ಮಂಡ್ಯ: ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಜೆಡಿಎಸ್ ಭದ್ರಕೋಟೆಯಾಗಿರುವ ಕೆ.ಆರ್.ಪೇಟೆ ಪ್ರಚಾರ ಅಖಾಡಕ್ಕೆ ಬಿಎಸ್ವೈ ಪುತ್ರ ವಿಜಯೇಂದ್ರ ಇಳಿದಿದ್ದಾರೆ.
ಕೆ.ಆರ್.ಪೇಟೆಯಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ ಮಾತನಾಡಿದ ಅವರು, ಯಡಿಯೂರಪ್ಪ ಒಕ್ಕಲಿಗ ವಿರೋಧಿಯಲ್ಲ, ಒಕ್ಕಲಿಗರನ್ನೇ ಸಿಎಂ ಮಾಡಿದವರು. ನಾನು ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಅಭ್ಯರ್ಥಿ ಆಗಲ್ಲ ಅನ್ನೋ ಮೂಲಕ ಸ್ಥಳೀಯ ನಾಯಕತ್ವಕ್ಕೆ ಮಣೆ ಹಾಕುವ ಸುಳಿವು ನೀಡಿದ್ದಾರೆ.
ಕಾರ್ಯಕರ್ತರ ಸಮಾವೇಶ ಬಳಿಕ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆಸಿ, ಮಂಡ್ಯದಲ್ಲಿ ಪಕ್ಷ ಬಲಪಡಿಸಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.