ಮಂಡ್ಯ : 100ಕ್ಕೆ ನೂರು ಭಾಗ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಭರವಸೆ ಇದೆ. ಮೈಶುಗರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸುತ್ತಾರೆ ಎಂದು ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಎಲ್ಲಾ ಜನಪ್ರತಿನಿಧಿಗಳು, ರೈತ ಸಂಘಟನೆಗಳ ಒಮ್ಮತದ ಅಭಿಪ್ರಾಯ ಇದೆ. ರಾಜ್ಯದ ಮುಖ್ಯಮಂತ್ರಿಗಳಿಗೆ ಒತ್ತಾಯ ತಂದು ಮೈಶುಗರ್ ಆರಂಭಕ್ಕೆ ಕ್ರಮ ವಹಿಸಲಾಗುತ್ತದೆ ಎಂದರು.
ಸಂಸದರನ್ನು ಸಹ ಮನವೊಲಿಸಿ ಎಲ್ಲರೂ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ. ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ನೀಡಲು ಬಿಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಓದಿ: ಬೈ ಎಲೆಕ್ಷನ್ ಅಖಾಡಕ್ಕೆ ಬಿಎಸ್ವೈ ಎಂಟ್ರಿ.. ಎರಡೂ ಕ್ಷೇತ್ರಗಳಲ್ಲಿ ತಲಾ ಎರಡೆರಡು ದಿನ ಕ್ಯಾಂಪೇನ್..