ಮಂಡ್ಯ: ಕಾರು ಅಪಘಾತದಲ್ಲಿ ಗಾಯಗೊಂಡವರನ್ನು ರಕ್ಷಣೆ ಮಾಡಲು ಮುಂದಾದವರೇ ಸಾವಿಗೀಡಾದ ಘಟನೆ ಮದ್ದೂರು ತಾಲೂಕಿನ ಬಿದರಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಘಟನೆಯಲ್ಲಿ ರಕ್ಷಣೆಗೆ ಧಾವಿಸಿದ್ದ ಪ್ರಸನ್ನ, ಪುಟ್ಟ ಹಾಗೂ ಮತ್ತೊಬ್ಬರು ಸಾವಿಗೀಡಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಳವಳ್ಳಿ ಕಡೆಯಿಂದ ಬರುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದನ್ನು ಗಮನಿಸಿದ ಸ್ಥಳೀಯರಾದ ಪುಟ್ಟ, ಪ್ರಸನ್ನ ಹಾಗೂ ಮತ್ತೊಬ್ಬರು ರಕ್ಷಣೆ ಮಾಡಲು ಹೋಗಿದ್ದಾರೆ. ಆದರೆ ರಕ್ಷಣೆಗೆ ಹೋಗುವ ತರಾತುರಿಯಲ್ಲಿ ವಿದ್ಯುತ್ ತಂತಿ ತುಂಡರಿಸಿ ಬಿದ್ದಿದ್ದನ್ನು ನೋಡದೇ ಕಾರನ್ನು ಸ್ಪರ್ಶಿಸಲು ಹೋಗಿದ್ದಾರೆ. ಈ ವೇಳೆ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ.
ಇನ್ನು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.