ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆ ನಾಗಮಂಗಲ ತಾಲೂಕಿನ ಹೊಸಕ್ಕಿಪಾಳ್ಯದ ಬಳಿ ನಡೆದಿದೆ.
ಬೆಂಗಳೂರು ಮೂಲದ ಶಂಕರ್ ಪ್ರಸಾದ್(20) ಮತ್ತು ಆಂಧ್ರಮೂಲದ ಶ್ರೀನಿವಾಸ್(22) ಮೃತ ದುರ್ದೈವಿಗಳು. ಗಾಯಾಳುಗಳಾದ ಬೆಂಗಳೂರಿನ ಅಕ್ಷರ್ ಗೌಡ, ಬಾಬು ಚಂಗಪ್ಪ, ಅಭಿಲಾಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೋಣಿಕೊಪ್ಪದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.