ಮಂಡ್ಯ: ಮಹಿಳೆಯೊಬ್ಬರ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ಮದ್ದೂರು ತಾಲೂಕಿನ ಬೋರಾಪುರ ಸರ್ಕಾರಿ ಶಾಲೆ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯಲ್ಲಿ ಸರಗಳ್ಳತನ ಪ್ರಕರಣಘಲು ಮುಂದುವರೆದಿದೆ. ಶಿಕ್ಷಕಿ ಸರೋಜಮ್ಮ ಎಂದಿನಂತೆ ಶಾಲೆಗೆ ತೆರಳುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂದಿನಿಂದ ಬಂದ ಸರಗಳ್ಳರು, ಸರೋಜಮ್ಮನ 40 ಗ್ರಾಂ ತೂಕದ ಮಾಂಗಲ್ಯ ಸರ ಎಳೆದಿದ್ದಾರೆ.
ಇದನ್ನೂ ಓದಿ: ಜಮೀನು ವಿವಾದ: ದುದ್ದ ಪೊಲೀಸ್ ಠಾಣೆಗೆ ಆಗಮಿಸಿದ ರಾಕಿ ಬಾಯ್
ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.