ಮಂಡ್ಯ: ಹಳೆ ರೇಡಿಯೋ ಮತ್ತು ಬ್ಲಾಕ್ ಅಂಡ್ ವೈಟ್ ಟಿವಿಗೆ ಹೆಚ್ಚಿನ ಹಣ ಕೊಟ್ಟು ಕೊಂಡುಕೊಳ್ಳುವುದಾಗಿ ನಂಬಿಸಿ ಮೋಸ ಮಾಡುತ್ತಿದ್ದ ಖತರ್ನಾಕ್ ತಂಡವನ್ನು ಮಳವಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಳವಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕಾರು, 2 ಬೈಕ್ ಸೇರಿದಂತೆ 10.36 ಲಕ್ಷ ರೂಪಾಯಿ ನಗದು ಜಪ್ತಿ ಮಾಡಿಕೊಂಡಿದ್ದಾರೆ.
ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಹಳೇ ಬ್ಲಾಕ್ ಅಂಡ್ ವೈಟ್ ಟಿವಿ, ಹಳೆ ರೇಡಿಯೋಗೆ ಹೆಚ್ಚಿನ ಹಣ ಕೊಡುವ ಪೋಸ್ಟ್ ಹಾಕಿ ವಂಚನೆ ಮಾಡುತ್ತಿದ್ದರು. ಇಂಜಿನಿಯರ್ ಒಬ್ಬರಿಗೆ 22 ಲಕ್ಷ ರೂಪಾಯಿ ವಂಚನೆ ಮಾಡಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.