ETV Bharat / state

ಚಲುವನಾರಾಯಣಸ್ವಾಮಿ ದೇಗುಲದ ಸ್ಥಾನಿಕರಿಂದ 'ಸಲಾಂ ಆರತಿ' ನಿಲ್ಲಿಸುವಂತೆ ಸರ್ಕಾರಕ್ಕೆ ಮನವಿ - Muslim merchants Boycott

ಮಂಡ್ಯ ಜಿಲ್ಲೆಯ ಪುರಾಣ ಪ್ರಸಿದ್ಧ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇಗುಲದಲ್ಲಿ ಚಾಲ್ತಿಯಲ್ಲಿರುವ ಸಲಾಂ ಆರತಿಯನ್ನು ನಿಲ್ಲಿಸುವಂತೆ ಸ್ವತಃ ಸ್ಥಾನಿಕರಿಂದಲೇ ಒತ್ತಾಯ ಕೇಳಿ ಬರುತ್ತಿದೆ.

ಸಲಾಂ ಆರತಿ
ಸಲಾಂ ಆರತಿ
author img

By

Published : Apr 1, 2022, 9:21 AM IST

Updated : Apr 1, 2022, 12:02 PM IST

ಮಂಡ್ಯ: ಸಕ್ಕರೆನಾಡು ಮಂಡ್ಯದ ಪ್ರಸಿದ್ಧ ಕ್ಷೇತ್ರ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇಗುಲದ ಸ್ಥಾನಿಕರಿಂದಲೇ ಸಲಾಂ ಆರತಿ ನಿಲ್ಲಿಸುವಂತೆ ಒತ್ತಾಯ ಕೇಳಿಬಂದಿದೆ. ಸಂಧ್ಯಾರತಿ ಹೆಸರನ್ನು ಉಳಿಸಿಕೊಂಡು ಸಲಾಂ ಕೈ ಬಿಡಬೇಕು ಎಂದು ಮೇಲುಕೋಟೆ ಸ್ಥಾನಿಕ ಶ್ರೀನಿವಾಸ್​ ಗುರೂಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಹಿಜಾಬ್ ವಿವಾದದ ಬಳಿಕ ಧಾರ್ಮಿಕ ದೇವಾಲಯಗಳ ಬಳಿ ಅನ್ಯ ಧರ್ಮೀಯರಿಗೆ ವ್ಯಾಪಾರ ನಿರ್ಬಂಧ ಹೇರುವಂತೆ ಒತ್ತಾಯ ಕೇಳಿಬಂದ ಬೆನ್ನಲ್ಲೇ ಸಲಾಂ ಆರತಿ ವಿಚಾರ ಸಾಕಷ್ಟು ಚರ್ಚೆಯಾಗಿತ್ತು. ಮಂಡ್ಯದಲ್ಲಿ ಧಾರ್ಮಿಕ ಪರಿಷತ್ತು ಸದಸ್ಯರು ಸೇರಿದಂತೆ ಹಿಂದೂ ಪರ ಸಂಘಟನೆಗಳು ಸಲಾಂ ಆರತಿ ನಿಲ್ಲಿಸುವಂತೆ ಮನವಿ ಮಾಡಿದ್ರು. ಇದೀಗ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇಗುಲದ ಸ್ಥಾನಿಕರು, ಸಲಾಂ ಆರತಿ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

ಸಂಧ್ಯಾರತಿ ಹೆಸರನ್ನು ಉಳಿಸಿಕೊಂಡು ಸಲಾಂ ಕೈ ಬಿಡಬೇಕು. ತ್ರಿಕಾಲದಲ್ಲಿ ದೇವರಿಗೆ ಆರತಿ ಮಾಡುವ ಪದ್ಧತಿ ಎಲ್ಲಾ‌ ದೇವಾಲಯದಲ್ಲಿ ಇದೆ. ಸಂಜೆ ವೇಳೆ ಮೇಲುಕೋಟೆ ದೇವಾಲಯದಲ್ಲಿ ಸಂಧ್ಯಾರತಿಯನ್ನು ಸಾವಿರಾರು ವರ್ಷಗಳಿಂದ ಮಾಡಿಕೊಂಡು ಬರಲಾಗಿದೆ. ಮುಸ್ಲಿಂ ದಾಳಿಕೋರರಿಂದ ದಾಳಿಯಾದ ಸಂದರ್ಭದಲ್ಲಿ ಅಥವಾ ಟಿಪ್ಪು ಕಾಲದಲ್ಲಿ ಸಂಧ್ಯಾರತಿಗೆ ಸಲಾಂ ಪದ ಸೇರಿದೆ. ಮೂಲ ಮೂರ್ತಿಗೆ ಆರತಿಯಾಗುವ ಸಂದರ್ಭದಲ್ಲಿ ದೇವಾಲಯದ ಹೊರಗಡೆ ದೀವಟಿಗೆ ಸಲಾಂ ಮಾಡಲಾಗುತ್ತೆ. ಬಳಿಕ ದೇವಾಲಯ ಗರ್ಭಗುಡಿಯ ಬಳಿಯೂ ದೀವಟಿಗೆ ಸಲಾಂ ಮಾಡಲಾಗುತ್ತೆ. ಸಂಧ್ಯಾರತಿಗೆ ಯಾರ ಆಕ್ಷೇಪಣೆ ಇಲ್ಲ. ಸಲಾಂ ಪದ ರದ್ದು ಮಾಡಬೇಕೆಂಬುದು ಹಲವು ವರ್ಷಗಳ ಕೂಗು. ಈ ವಿಚಾರವಾಗಿ ಸರ್ಕಾರ ಪರಿಶೀಲನೆ ಮಾಡಿ ಸಲಾಂ ಪದ ತೆಗೆಯಬೇಕು ಎಂದು ಶ್ರೀನಿವಾಸ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮಂಡ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳ ಬಾಯ್ಕಾಟ್ ಮುಂದುವರಿದೆ. ಹಿಂದೂ ಧಾರ್ಮಿಕ ಕೇಂದ್ರಗಳ ಬಳಿ ಅನ್ಯ ಧರ್ಮೀಯ ವ್ಯಾಪಾರಿಗಳ ನಿಷೇಧಕ್ಕೆ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ. ಶ್ರೀರಂಗಪಟ್ಟಣ ವ್ಯಾಪ್ತಿಯ ಶ್ರೀರಂಗನಾಥಸ್ವಾಮಿ, ನಿಮಿಷಾಂಭ ದೇವಾಲಯ, ಸಂಗಮ ಸೇರಿದಂತೆ ಹಿಂದೂ ಧಾರ್ಮಿಕ ಕೇಂದ್ರಗಳ ಬಳಿ ವ್ಯಾಪಾರಕ್ಕೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು, ದೇವಾಲಯಗಳಲ್ಲಿ ಹಿಂದೂ ಧರ್ಮದವರನ್ನು ಮಾತ್ರ ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಕೆಂದು ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರಗೆ ಹಿಂದೂ ಪರಿಷತ್ ಮನವಿ ಸಲ್ಲಿಸಿದೆ.

Last Updated : Apr 1, 2022, 12:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.