ETV Bharat / state

ಕೆಆರ್‌ಎಸ್​ಗೆ ಬಾಗಿನ‌ ಅರ್ಪಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ.. - ಭಾನುಪ್ರಕಾಶ್ ನೇತೃತ್ವದಲ್ಲಿ ಕೆಆರ್​ಎಸ್​ ಡ್ಯಾಂಗೆ ಪೂಜೆ

ಕೆಆರ್‌ಎಸ್​ಗೆ ಒಂದು ಇತಿಹಾಸ ಇದೆ. ಅವತ್ತಿನ ಮಹಾರಾಜರು ಮತ್ತು ಆಡಳಿತದವರು ಉತ್ತಮ ಕೆಲಸವನ್ನು ಮಾಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ ವಿಶ್ವೇಶ್ವರಯ್ಯ ಮನಸ್ಸು ಮಾಡದಿದ್ರೆ, ಮಂಡ್ಯ- ಮೈಸೂರು ಇಷ್ಟರ ಮಟ್ಟಿಗೆ ಇರುತ್ತಿರಲಿಲ್ಲ..

cm-basavaraja-bommai-worship-to-kavery-river
ಕೆಆರ್‌ಎಸ್​ಗೆ ಬಾಗಿನ‌ ಅರ್ಪಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
author img

By

Published : Nov 2, 2021, 5:54 PM IST

Updated : Nov 2, 2021, 7:45 PM IST

ಮಂಡ್ಯ : ಕೆಆರ್‌ಎಸ್‌ ಡ್ಯಾಂ ತುಂಬಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಬಾಗಿನ ಅರ್ಪಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದಾರೆ.

ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಈ ವೇಳೆ ಮಾತನಾಡಿದ ಅವರು, ಮೊದಲ ಬಾರಿಗೆ ಬಂದು ನಾನು ಕೆಆರ್‌ಎಸ್‌ಗೆ ಬಾಗಿನ ನೀಡಿದ್ದೇನೆ. ಇದು ನನ್ನ ಸೌಭಾಗ್ಯವಾಗಿದೆ. ಪ್ರತಿ ವರ್ಷವೂ ಇದೇ ರೀತಿ ಕಾವೇರಿ ತುಂಬಿ ಹರಿಯಲಿ. ಈ ನಾಡಿನ ರೈತರಿಗೆ ಅನುಕೂಲವಾಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.

ಕೆಆರ್‌ಎಸ್​ಗೆ ಬಾಗಿನ‌ ಅರ್ಪಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ..

ಕೆಆರ್‌ಎಸ್​ಗೆ ಒಂದು ಇತಿಹಾಸ ಇದೆ. ಅವತ್ತಿನ ಮಹಾರಾಜರು ಮತ್ತು ಆಡಳಿತದವರು ಉತ್ತಮ ಕೆಲಸವನ್ನು ಮಾಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ ವಿಶ್ವೇಶ್ವರಯ್ಯ ಮನಸ್ಸು ಮಾಡದಿದ್ರೆ, ಮಂಡ್ಯ- ಮೈಸೂರು ಇಷ್ಟರ ಮಟ್ಟಿಗೆ ಇರುತ್ತಿರಲಿಲ್ಲ ಎಂದು ತಿಳಿಸಿದರು‌.

ದಶಕಗಳಿಂದ ಕಾವೇರಿ ಮಾತೆ ಅನ್ನವನ್ನು ಕೊಡ್ತಿದ್ದಾಳೆ‌. ಕೆಆರ್‌ಎಸ್ ಡ್ಯಾಂ ಅನ್ನು ನಾವು ಮುಂಬರುವ 100 ವರ್ಷ ಉಳಿಸಿಕೊಳ್ಳಲು ಸಂಪೂರ್ಣ ಆಧುನೀಕರಣ ಮಾಡಬೇಕು ಎಂದು ಹೇಳಿದರು. ನೀರಾವರಿ ಸಚಿವನಾಗಿದ್ದಾಗ ಗೇಟ್ ನೋಡಿದ್ದೆ. ಆಗ ಗೇಟ್​ನಲ್ಲಿ ರಂಧ್ರಗಳಿದ್ದವು.

ಡ್ಯಾಂಗೆ 75 ವರ್ಷವಾಗಿದೆ. ಗೇಟ್ ಬದಲಾವಣೆ ಮಾಡಿಲ್ಲ. ಎರಡು ದಿನ ನನಗೆ ನಿದ್ದೆ ಬರಲಿಲ್ಲ. ಎಲ್ಲಾ ಮ್ಯಾಪ್ ತಯಾರು ಮಾಡಿ ಎಂದು ಹೇಳಿದ್ದೆ. ಮಹಾರಾಜರ ಕಾಲದಲ್ಲಿ ಕಟ್ಟಿದ ಅಣೆಕಟ್ಟೆಗಳಲ್ಲಿ 14 ನೆಲಸಮವಾಗಿವೆ. 11 ಅಣೆಕಟ್ಟುಗಳನ್ನು ಆಧುನೀಕರಣ ಮಾಡಲಾಗಿದೆ ಎಂದು ತಿಳಿಸಿದರು.

1600 ಕೋಟಿ ವೆಚ್ಚದಲ್ಲಿ ವಿಸಿ ನಾಲೆ ಅಧುನೀಕರಣ ಮಾಡಲು ಕೆಲಸ ಕೈಗೆತ್ತಿಕೊಳ್ಳುತ್ತಿದ್ದೇವೆ. ಅನ್ನ ಕೊಡುವ ನೀರಾವರಿ ಯೋಜನೆ, ಎಲ್ಲದಕ್ಕೂ ನಮ್ಮ ಸರ್ಕಾರ ಸಹಕಾರ ಕೊಡುತ್ತದೆ.

2012ರಲ್ಲಿ 14 ಟಿಎಂಸಿ ನೀರು ಬಿಡಬೇಕೆಂದು ಕೋರ್ಟ್​ ಆದೇಶ ಇತ್ತು. ಹಾಗಾಗಿ, ಕೋರ್ಟ್​ಗೆ ಹೋಗಿದ್ದೆ. ಆನಂತರ ಮಳೆಯಾಗಿದ್ದರಿಂದ ರೈತರಿಗೆ ಬೇಸಿಗೆ ಕಾಲದಲ್ಲಿಯೂ ನೀರು ಒದಗಿಸುವ ಕೆಲಸವಾಯಿತು ಎಂದು ಹೇಳಿದರು.

ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮೇಕೆದಾಟು ಯೋಜನೆ ಕೈಗೆತ್ತಿಕೊಂಡಿದ್ದೇವೆ. ತಮಿಳುನಾಡಿನವರು ಕ್ಯಾತೆ ತೆಗೆದಿದ್ದಾರೆ. ನಾವು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ನಮ್ಮ ಯೋಜನೆ ಪೂರ್ಣಗೊಳಿಸಲು ಬದ್ದರಾಗಿದ್ದೇವೆ.

ನಮ್ಮದು ನ್ಯಾಯ ಸಮ್ಮತ ಯೋಜನೆಯಾಗಿದೆ. ಎರಡೂ ರಾಜ್ಯಗಳ ಮಧ್ಯೆ ಸಂಕಷ್ಟದ ಸಮಯದಲ್ಲಿ ನೀರು ಬಳಸಿಕೊಳ್ಳಲು ಈ ಯೋಜನೆಯನ್ನ ಪೂರ್ಣಗೊಳಿಸುತ್ತೇವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸಿ ನಾರಾಯಣಗೌಡ ಮಾತನಾಡಿದರು. ಕೃಷ್ಣರಾಜಸಾಗರ ಅಣೆಕಟ್ಟು ನಿರ್ಮಿಸಲು ಹಣದ ಕೊರತೆ ಉಂಟಾಗಿತ್ತು. ಆ ಸಂದರ್ಭದಲ್ಲಿ ಮಹಾರಾಜರು ಸಂಸ್ಥಾನದ ಚಿನ್ನಾಭರಣಗಳನ್ನು ಮುಂಬೈನಲ್ಲಿ 9 ಕೋಟಿಗೆ ಮಾರಿ ಸರ್. ಎಂ ವಿಶ್ವೇಶ್ವರಯ್ಯ ಅವರ ನೇತೃತ್ವದಲ್ಲಿ ಕನ್ನಂಬಾಡಿ ನಿರ್ಮಾಣ ಮಾಡಿದರು. ಇದು ರೈತರಿಗೆ ಹಾಗೂ ಈ ಭಾಗದ ಜನರಿಗೆ ಸೌಭಾಗ್ಯವಾಗಿದೆ ಎಂದು ಹೇಳಿದರು.

ಕೃಷ್ಣರಾಜಸಾಗರ ರಾಜ್ಯದ 8 ಜಿಲ್ಲೆಗಳ 38 ಲಕ್ಷ ಎಕರೆ ಪ್ರದೇಶಕ್ಕೆ ತಾಯಿ ಕಾವೇರಿ ಮಾತೆ ನೀರನ್ನು ಕೊಟ್ಟು ಅನ್ನ ನೀಡುತ್ತಿದ್ದಾಳೆ. ಕನ್ನಂಬಾಡಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅದನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಓದಿ: ಕಾಫೀನಾಡಿನ ಕೋದಂಡರಾಮನಿಗೆ ನಿತ್ಯವೂ ಕನ್ನಡದಲ್ಲೇ ಮಂತ್ರಪುಷ್ಪ.. ಇದು ಕಣ್ಣನ್​ ದೇವಾಲಯ!!

Last Updated : Nov 2, 2021, 7:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.