ಮಂಡ್ಯ: ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಬಂಧಿಸಲ್ಪಟ್ಟಿದ್ದ ಕಾಳಿಮಠದ ಋಷಿಕೇಶ ಸ್ವಾಮೀಜಿಗೆ ಶ್ರೀರಂಗಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಸಿಕ್ಕಿದೆ.
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ರೀತಿಯಲ್ಲಿ ಕೆಡುವಬೇಕು ಎಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಪೊಲೀಸರು ಅವರನ್ನು ಬಂಧಿಸಿ, ಕೋರ್ಟ್ಗೆ ಹಾಜರುಪಡಿಸಿದ್ದರು. ಚಿಕ್ಕಮಗಳೂರಿನ ಕಾಳಿಮಠದಿಂದ ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿ ಕರೆತಂದಿದ್ದರು.
ಇದನ್ನೂ ಓದಿ: ಸಿಎಂ ಮನೆ ಮುಂದೆ ಕಾನ್ಸ್ಟೇಬಲ್ಗಳಿಂದ ಗಾಂಜಾ ಮಾರಾಟ : ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಅಮಾನತು
ಸ್ವಾಮೀಜಿಯವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಸ್ವಾಮೀಜಿಯನ್ನು ಜೈಲಿಗೆ ಕಳಿಸಲಾಗಿತ್ತು. ಬಳಿಕ ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ಕರೆತಂದಿದ್ದರು.
ಇಂದು ಜಾಮೀನು ಅರ್ಜಿ ವಿಚಾರಣೆ ಸಂಬಂಧ ತೀರ್ಪು ನೀಡಿರುವ ಶ್ರೀರಂಗಪಟ್ಟಣದ ಜೆಎಂಎಫ್ಸಿ ನ್ಯಾಯಾಲಯವು ಋಷಿಕೇಶ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ನೀಡಿದೆ.
ಕಾರ್ಯಕರ್ತರಿಂದ ಸ್ವಾಮೀಜಿಗೆ ಸ್ವಾಗತ:
ಜಾಮೀನಿನ ಮೇಲೆ ಹೊರಬಂದ ಸ್ವಾಮೀಜಿಗೆ ಹಿಂದೂಪರ ಕಾರ್ಯಕರ್ತರು ಹೂವಿನ ಹಾರ ಹಾಕಿ, ಘೋಷಣೆ ಕೂಗುವ ಮೂಲಕ ಸ್ವಾಗತಿಸಿದರು. ಈ ಸಮಯದಲ್ಲಿ ಜೈಲಿನ ಅಧಿಕಾರಿಗಳು ಹಾಗೂ ಕಾರ್ಯಕರ್ತರ ನಡುವೆ ಕೆಲಕಾಲ ಮಾತಿನ ಚಕಮಕಿಯೂ ನಡೆಯಿತು.
ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ವಿವಾದಿತ ಹೇಳಿಕೆ : ಕಾಳಿಮಠದ ಋಷಿಕುಮಾರ್ ಸ್ವಾಮೀಜಿ ಬಂಧನ