ಮಂಡ್ಯ : ಶ್ರೀರಂಗಪಟ್ಟಣ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ಮೂಲ ಕಾಂಗ್ರೆಸ್ ನಾಯಕರು ತಿರುಗಿ ಬಿದ್ದಿದ್ದಾರೆ.
ನಿನ್ನೆ ಶ್ರೀರಂಗಪಟ್ಟಣದ ಟಿಎಪಿಸಿಎಂಎಸ್ ಸಮುದಾಯ ಭವನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಪಾಲಹಳ್ಳಿ ಚಂದ್ರಶೇಖರ್ ಹಾಗೂ ಮರಳಾಗಾಲ ಧನಂಜಯ್ ನೇತೃತ್ವದಲ್ಲಿ ಸಭೆ ನಡೆಲಾಗಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕಾರ್ಯಕರ್ತರು ಹಾಗೂ ಮುಖಂಡರುಗಳ ಸಭೆಯಲ್ಲಿ ಮೂಲ ಕಾಂಗ್ರೆಸ್ಸಿಗರ ಕಡೆಗಣನೆ ಹಿನ್ನೆಲೆ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ಶಕ್ತಿ ಪ್ರದರ್ಶನಕ್ಕಾಗಿ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ 50ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಸದಸ್ಯರು ಭಾಗಿ ಹಿನ್ನೆಲೆ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ಆತಂಕಕ್ಕೊಳಗಾಗಿದ್ದರು.
ಇದನ್ನೂ ಓದಿ: ಪರೀಕ್ಷೆ ನಡೆಸಬಾರದು ಎಂದು ಕೇಳಲು ವಿದ್ಯಾರ್ಥಿಗಳಿಗೆ ಹಕ್ಕಿಲ್ಲ: ಹೈಕೋರ್ಟ್
ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಕಾರ್ಯವೈಖರಿಯನ್ನು ಖಂಡಿಸಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಮರಳಾಗಾಲ ಧನಂಜಯ್, ವಿಜಯ್ ಕುಮಾರ್, ಪಾರ್ವತಮ್ಮ, ಶ್ರೀನಿವಾಸ್, ಗೋಪಾಲ್ ಸೇರಿದಂತೆ 500ಕ್ಕೂ ಹೆಚ್ಚು ಮುಖಂಡರು ಭಾಗಿಯಾಗಿದ್ದರು ಎನ್ನಲಾಗಿದೆ.