ಮಂಡ್ಯ: ಕೊಡಗಿನಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಪೋಸ್ಟರ್ಗೆ ಮೊಟ್ಟೆ ಎಸೆದರು. ಈ ಘಟನೆ ಮಂಡ್ಯದಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿರುವುದನ್ನು ವಿರೋಧಿ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾಂಗ್ರೆಸ್ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಭಾವಚಿತ್ರಗಳಿರುವ ಇರುವ ಪೋಸ್ಟರ್ಗೆ ಮೊಟ್ಟೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಖಂಡನೀಯ. ಅವರು ವಿಷಪೂರಿತ ಮೊಟ್ಟೆಗಳನ್ನು ಎಸೆದಿದ್ದಾರೆ. ಭದ್ರತೆ ಲೋಪದಿಂದ ಕೃತ್ಯ ನಡೆದಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ ಕೈ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿಗರಿಂದ ಮೊಟ್ಟೆ ಎಸೆತ, ಕಪ್ಪು ಬಾವುಟ ಪ್ರದರ್ಶನ