ಮಂಡ್ಯ: ಜಿಲ್ಲೆಯಲ್ಲಿ ಸೋಮವಾರ 929 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 26,503 ಕ್ಕೆ ಏರಿಕೆಯಾಗಿದ್ದು, ನಿನ್ನೆ 356 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 22,169 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೆ ಕೊರೊನಾ ಮಹಾಮಾರಿಯಿಂದ ಜಿಲ್ಲೆಯಲ್ಲಿ 193 ಮಂದಿ ಸಾವನ್ನಪ್ಪಿದ್ದಾರೆ.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾಹಿತಿ ಪ್ರಕಾರ ಮಂಡ್ಯ 398, ಮದ್ದೂರು 123, ಮಳವಳ್ಳಿ 83, ಪಾಂಡವಪುರ 67, ಶ್ರೀರಂಗಪಟ್ಟಣ 72, ಕೆ.ಆರ್.ಪೇಟೆ 72, ನಾಗಮಂಗಲ ತಾಲೂಕಿನ 99, ಹೊರ ಜಿಲ್ಲೆಯ 15 ಪ್ರಕರಣ ದಾಖಲಾಗಿವೆ.
ಇದನ್ನೂ ಓದಿ : ಮಕ್ಕಳಿಗಾಗಿ ಹೊಸ ಕನ್ನಡ ಚಾನಲ್: ಇಂದಿನಿಂದ ನಿಮ್ಮ ಮನೆಯಂಗಳಕ್ಕೆ 'ಈಟಿವಿ ಬಾಲ ಭಾರತ'